ಮೈಸೂರು: ಸರ್ಕಾರ ಪಡಿತರ ವಿತರಣೆ ಮಾಡದ ಹಿನ್ನೆಲೆಯಲ್ಲಿ ಸಾರ್ವಜನಿಕರು ಲಾಕ್​ಡೌನ್​ ನಡುವೆಯೂ ಬೀದಿಗಿಳಿದು ಪ್ರತಿಭಟನೆ ನಡೆಸಿದ ಘಟನೆ ಮೈಸೂರಿನ ಗಾಂಧಿನಗರ ಬಡಾವಣೆಯಲ್ಲಿ ಬುಧವಾರ ನಡೆದಿದೆ.
ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರುವ ಗಾಂಧಿನಗರ ಬಡಾವಣೆಯಲ್ಲಿ ಪಡಿತರ ವಿತರಣೆ ಮಾಡಿಲ್ಲ. ಇದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ನಮಗೆ ಪಡಿತರ ಬೇಕು ಎಂದು ಆಗ್ರಹಿಸಿ ನೂರಾರು ಮಂದಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಶಾಸಕರು ಹಾಗೂ ಸ್ಥಳೀಯ ಪಾಲಿಕೆ ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನೂರಾರು ಮಂದಿ ಜನರು ಪ್ರತಿಭಟನೆ ನಡೆಸುತ್ತಿದ್ದರೂ ಪೊಲೀಸರು ಅತ್ತ ಸುಳಿಯಲಿಲ್ಲ. ಮೈಸೂರಿನಲ್ಲಿ ಬುಧವಾರ 10 ಹೊಸ ಕರೊನಾ ಸೋಂಕಿತರು ಪತ್ತೆಯಾಗಿದ್ದು, ಇದರ ನಡುವೆ ಪ್ರತಿಭಟನೆ ನಡೆಯುತ್ತಿದ್ದರೂ ಪೊಲೀಸರು ಸ್ಥಳಕ್ಕೆ ತೆರಳದೆ ಇರುವುದು ಅನುಮಾನ ಮೂಡಿಸಿದೆ.
ಕರೊನಾ ವೈರಸ್​ ರಾಷ್ಟ್ರದ ಬಾವಲಿಗಳಲ್ಲೂ ಪತ್ತೆಯಾಗಿದೆ: ಯಾವ ಪ್ರಭೇದದ ಬಾವಲಿ ಗೊತ್ತಾ?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × three =
Remember me
