ಮೈಸೂರು:ನೂತನ ಸಂಸತ್​ ಭವನದಲ್ಲಿ ಉಂಟಾದ ಭದ್ರತಾ ಲೋಪ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ಘಟನೆ ಸಂಬಂಧ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಮೌನ ಮುರಿದಿರುವ ಸಂಸದ ಪ್ರತಾಪ್​ ಅದರ ಬಗ್ಗೆ ಬಿಟ್ಟು ಬೇರೆ ಬಿಟ್ಟು ಬೇರೆ ಏನಾದರೂ ಕೇಳಿ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಮಾತನಾಡಿದ ಸಂಸದ ಪ್ರತಾಪ್​ ಸಿಂಹ, ಆ ವಿಚಾರದಲ್ಲಿ ಯಾವುದೇ ವಿವರಣೆ ಕೊಡುವುದಿಲ್ಲ. ಆ ಪ್ರಶ್ನೆ ಬಿಟ್ಟು ಬೇರೆ ಏನಾದರೂ ಇದ್ದರೆ ಕೇಳಿ ಎಂದಿದ್ದಾರೆ.
ಇದನ್ನೂ ಓದಿ:ಲೋಕಸಭೆ ಚುನಾವಣೆಗೂ ಮುಂಚಿತವಾಗಿ ಕಾಂಗ್ರೆಸ್​ನಲ್ಲಿ ಮಹತ್ವದ ಬದಲಾವಣೆ; ಯುಪಿ ಉಸ್ತುವಾರಿಯಾಗಿ ಪ್ರಿಯಾಂಕ ಗಾಂಧಿ ಔಟ್
ಪ್ರತಾಪ ಸಿಂಹ ದೇಶದ್ರೋಹಿಯೇ ಅಥವಾ ದೇಶಪ್ರೇಮಿಯೇ ಎನ್ನುವುದು ಬೆಟ್ಟದ ಚಾಮುಂಡಿ ತಾಯಿ ಹಾಗೂ ಕೊಡಗಿನ ಕಾವೇರಿ ತಾಯಿಗೆ ಗೊತ್ತು. ನನ್ನ ಲೇಖನಗಳನ್ನು ಓದಿದ ಓದುಗರಿಗೆ ಗೊತ್ತು. ಇದಕ್ಕೆಲ್ಲಾ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಜನರು ಮುಂಬರುವ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ.
ನಾನು ದೇಶಪ್ರೇಮಿಯೋ ಅಥವಾ ದೇಶದ್ರೋಹಿಯೋ ಎಂದು ತೀರ್ಮಾನ ಮಾಡುತ್ತಾರೆ. ಈ ವಿಚಾರದಲ್ಲಿ ಇಷ್ಟು ಮಾತ್ರವೇ ಹೇಳುತ್ತೇನೆ. ಆ ಬಗ್ಗೆ ಇನ್ನೇನೂ ಕೇಳಬೇಡಿ ಎಂದು ಭದ್ರತಾ ಲೋಪ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 11 =
Remember me
