ಮಂಡ್ಯ:ನ್ಯಾಯಬೆಲೆ ಅಂಗಡಿಗಳಲ್ಲಿ ಮೈಸೂರು ಸ್ಯಾಂಡಲ್ ಸೋಪ್ ವಿತರಣೆ ಮಾಡಲು ಪೂರಕ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರಗಳ ಸಚಿವ ಕೆ.ಗೋಪಾಲಯ್ಯ ಹೇಳಿದರು.
ನಗರದ ಡಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಬೆಲೆ ಅಂಗಡಿಗಳಲ್ಲಿ ಚಿಲ್ಲರೆ ಅಭಾವದ ನೆಪವೊಡ್ಡಿ ಕಳಪೆ ದರ್ಜೆ ಸೋಪ್​ಗಳನ್ನು ಗ್ರಾಹಕರಿಗೆ ನೀಡುತ್ತಿರುವುದು ಕಂಡುಬಂದಿದೆ. ಇದರ ಬಗ್ಗೆ ಪರಿಶೀಲನೆ ನಡೆಸಿ ಮೈಸೂರು ಸ್ಯಾಂಡಲ್ ಸೋಪ್ ವಿತರಣೆಗೆ ತ್ವರಿತ ಕ್ರಮ ವಹಿಸಲಾಗುವುದು ಎಂದರು.
ಮುಂದಿನ ವರ್ಷದಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆ ಕಾರ್ಯಾಚರಣೆಯನ್ನು ನವೆಂಬರ್ ಮೊದಲ ವಾರದಿಂದಲೇ ಆರಂಭಿಸಲಾಗುವುದು. ಜನವರಿ-ಫೆಬ್ರವರಿಯಲ್ಲಿ ಭತ್ತ, ರಾಗಿ, ಜೋಳ ಖರೀದಿಸುವುದರಿಂದ ರೈತರಿಗೆ ತೀವ್ರ ಅನನುಕೂಲವಾಗುತ್ತಿದೆ. ನವೆಂಬರ್-ಡಿಸೆಂಬರ್ ನಲ್ಲಿಯೇ ಭತ್ತ ಕಟಾವಿಗೆ ಬರುವುದರಿಂದ ನವೆಂಬರ್ ಮೊದಲ ವಾರದಿಂದಲೇ ಕೃಷಿ, ಕಂದಾಯ ಹಾಗೂ ಆಹಾರ ಇಲಾಖೆ ಕಾರ್ಯಾಚರಣೆ ನಡೆಸಬೇಕು ಎಂದರು.
ಪ್ರಸ್ತುತ ಪ್ರತಿ ಎಕರೆಗೆ 16 ಕ್ವಿಂಟಾಲ್ ಭತ್ತ ಮತ್ತು 10 ಕ್ವಿಂಟಾಲ್ ರಾಗಿ ಖರೀದಿಸಲಾಗುತ್ತಿದೆ. ಖರೀದಿ ಪ್ರಮಾಣ ಹೆಚ್ಚಿಸಬೇಕೆಂಬ ಒತ್ತಡ ರೈತರಿಂದ ಕೇಳಿಬರುತ್ತಿದೆ. ಇದರ ಬಗ್ಗೆ ಇಲಾಖೆ ಅಧಿಕಾರಿಗಳ ಸಭೆ ಕರೆದು ರ್ಚಚಿಸಿ ಹೆಚ್ಚುವರಿ ಖರೀದಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
