ಬೆಂಗಳೂರು:ಕರ್ನಾಟಕ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ.
ಈ ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್‌ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು 2 ಕೋಟಿ ರೂ.ಬೆಲೆಯ ಮಾಲು ಪತ್ತೆಯಾಗಿದೆ.
ನಕಲಿ ತಯಾರಿಕೆ ಆರೋಪದ ಮೇಲೆ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಧಿಸಲಾಗಿದೆ. ಮಾಲಕಪೇಟೆ ಪೊಲೀಸರಿಗೆ ದೂರು ನೀಡಿದ್ದು ತನಿಖೆ ನಡೆದಿದೆ.
ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಕೆಎಸ್‌ಡಿಎಲ್ ಅಧ್ಯಕ್ಷರೂ ಆದ ಸಚಿವ ಎಂ.ಬಿ. ಪಾಟೀಲ ಅವರಿಗೆ ಅನಾಮಧೇಯ ಕರೆ ಬಂದಿತ್ತು. ಬಳಿಕೆ ಸಚಿವರು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್ ಅವರಿಗೆ ನಿಗಾ ವಹಿಸಲು ಸೂಚಿಸಿದ್ದರು.
ಅದರಂತೆ, ಸಿಕಂದರಾಬಾದಿನಲ್ಲಿರುವ ಸಂಸ್ಥೆಯ ಅಧಿಕೃತ ಮಾರಾಟ ಕಚೇರಿಯ ಸಿಬ್ಬಂದಿ ತಮಗೆ ಸಿಕ್ಕ ಸುಳಿವಿನ ಜಾಡು ಹಿಡಿದು ಕಾರ್ಯಪ್ರವೃತ್ತರಾಗಿದ್ದರು.
ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟವಾಗುತ್ತಿರುವುದು ಕಂಡುಬಂದಿತ್ತು. ಆದರೆ ಅದನ್ನು ಯಾರು ಪೂರೈಸುತ್ತಿದ್ದಾರೆ ಎಂಬ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ. ಆಗ ಕೆಎಸ್‌ಡಿಎಲ್ ಸಿಬ್ಬಂದಿ ಸ್ವತಃ 1 ಲಕ್ಷ ರೂ. ಬೆಲೆಯ ಉತ್ಪನ್ನ ಖರೀದಿಸಿ, ಅದರ ಮೂಲ ಪತ್ತೆಗೆ ಕಾರ್ಯಪವೃತ್ತರಾದರು.
ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂ. ಬೆಲೆಯ ಸೋಪು ಖರೀದಿಗೆ ಆರ್ಡರ್ ಕೊಟ್ಟಿದ್ದರು. ಅದನ್ನು ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ಉತ್ಪಾದನೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿದ್ದರು. ಹೀಗೆ ಕಾರ್ಯಾಚರಣೆ ನಡೆಸಿದಾಗ ನಕಲಿ ಉತ್ಪಾದನಾ ಘಟಕ ಪತ್ತೆಯಾಯಿತು ಎಂದು ಕೆಎಸ್‌ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ವಿವರಿಸಿದ್ದಾರೆ.
ತಲಾ 150 ಗ್ರಾಂ ತೂಕದ 3 ಸಾಬೂನುಗಳಿರುವ 20 ಕಾರ್ಟನ್ ಬಾಕ್ಸ್‌ಗಳು (ಪ್ರತಿಯೊಂದು ಬಾಕ್ಸ್ ನಲ್ಲಿ 90ರಂತೆ ಒಟ್ಟು 1800 ಪೀಸ್‌ಗಳು), ತಲಾ 75 ಗ್ರಾಂ ನ 47 ಕಾರ್ಟನ್ ಬಾಕ್ಸ್‌ಗಳು (9400 ಪೀಸ್‌ಗಳು), 150 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಖಾಲಿ ಕಾರ್ಟನ್ ಬಾಕ್ಸ್‌ಗಳು ಮತ್ತು 75 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಕಾರ್ಟನ್ ಬಾಕ್ಸ್‌ಗಳು ನಕಲಿ ಘಟಕದಲ್ಲಿ ಪತ್ತೆಯಾಗಿವೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಕೆಎಸ್‌ಡಿಎಲ್ ಉತ್ಪನ್ನಗಳ ಮಾರುಕಟ್ಟೆಯನ್ನು ದೇಶ ಹಾಗೂ ವಿದೇಶಗಳಿಗೆ ವಿಸ್ತರಿಸಲು ಸ್ವತಃ ಆಸಕ್ತಿ ವಹಿಸಿ ಕ್ರಮ ತೆಗೆದುಕೊಂಡಿರುವ ಸಚಿವ ಪಾಟೀಲ, ತಪ್ಪಿತಸ್ಥರಿಗೆ ಶಿಕ್ಷೆಯಾಗುವುದನ್ನು ಖಾತ್ರಿಗೊಳಿಸಲು ಗಮನ ವಹಿಸಲಾಗುವುದು ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 5 =
Remember me
