ಮೈಸೂರು: ನೆರೆ ರಾಜ್ಯ ಕೇರಳದ ಕೋಳಿಗಳಲ್ಲಿ ಹಕ್ಕಿಜ್ವರದ ವೈರಸ್​ ಕಾಣಿಸಿಕೊಂಡ ಬೆನ್ನಲ್ಲೇ ನಗರದಲ್ಲಿ ಸಂಭವಿಸಿರುವ ಕೊಕ್ಕರೆಗಳ ಸಾವು ಸಾರ್ವಜನಿಕರಲ್ಲಿ ಭೀತಿ ಮೂಡಿಸಿದೆ.
ಮೈಸೂರಿನ 55ನೇ ವಾರ್ಡ್​ ವ್ಯಾಪ್ತಿಯಲ್ಲಿ ವಾರದಿಂದ ಅಂದಾಜು 12 ಕೊಕ್ಕರೆಗಳು ಮೃತಪಟ್ಟಿವೆ. ಪ್ರತಿ ದಿನ ಕೊಕ್ಕರೆಗಳು ಸಾಯುತ್ತಿವೆ. ಹೀಗಾಗಿ ಹಕ್ಕಿಜ್ವರ ಹರಡಿರಬಹುದು ಎನ್ನುವ ಭೀತಿ ಸಾರ್ವಜನಿಕರಿಗೆ ಎದುರಾಗಿದೆ.
ಮಹಾನಗರ ಪಾಲಿಕೆಯ ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಡಾ. ನಾಗರಾಜ್ ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಮೃತ ಕೊಕ್ಕರೆಗಳ ಅಂಗಾಂಶವನ್ನು ಸಂಗ್ರಹಿಸಿ ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ವಾರದಲ್ಲಿ 12 ಕೊಕ್ಕರೆಗಳು ಮೃತಪಟ್ಟಿರುವುದು ಅನುಮಾನಕ್ಕೆ ಕಾರಣವಾಗಿದೆ. ಹಕ್ಕಿಜ್ವರದ ವೈರಸ್​ನಿಂದ ಕೊಕ್ಕರೆಗಳು ಮೃತಪಟ್ಟಿರಬಹುದು ಎಂದು ನಿರ್ದೇಶಕ ಡಾ.ನಾಗರಾಜ್​ ತಿಳಿಸಿದ್ದಾರೆ.
ನಗರದಲ್ಲಿ ಕೋಳಿಗಳನ್ನು ಪರೀಕ್ಷೆ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.ನಗರಪಾಲಿಕೆ ಸದಸ್ಯ ಮಾ.ವಿ.ರಾಮಪ್ರಸಾದ್ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. (ದಿಗ್ವಿಜಯ ನ್ಯೂಸ್​)
ಕೇರಳದಲ್ಲಿ ಮೂರು ವರ್ಷದ ಮಗುವಿನಲ್ಲಿ ಕೊರೊನಾ ಸೋಂಕು; ಪ್ರತ್ಯೇಕ ವಾರ್ಡ್​ನಲ್ಲಿಟ್ಟು ಚಿಕಿತ್ಸೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fifteen − 14 =
Remember me
