ಮೈಸೂರು:ಮೈಸೂರು ವಿಶ್ವವಿದ್ಯಾಲಯ ಕಾಮಕಾಂಡದ ಕಳಂಕಕ್ಕೆ ಒಳಗಾಗಿದ್ದು, ಸಂಶೋಧನಾ ವಿದ್ಯಾರ್ಥಿನಿಯನ್ನು ಮನೆಗೇ ಕರೆಸಿಕೊಂಡಿದ್ದ ಪ್ರೊಫೆಸರ್, ಪತ್ನಿಯ ಕೈಗೆ ರೆಡ್​ ಹ್ಯಾಂಡೆಡ್​ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ. ಪ್ರಕರಣವೀಗ ಪೊಲೀಸ್​ ಠಾಣೆಯ ಮೆಟ್ಟಿಲನ್ನೂ ಏರಿದೆ.
ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಪ್ರಾಧ್ಯಾಪಕ ರಾಮಚಂದ್ರ ಅವರೇ ಆರೋಪಿ. ಇವರು ತಮ್ಮಿಂದ ಮಾರ್ಗದರ್ಶನ ಪಡೆಯುತ್ತಿದ್ದ ಪಿಎಚ್​ಡಿ ವಿದ್ಯಾರ್ಥಿನಿಯನ್ನೇ ಮನೆಗೆ ಕರೆಸಿಕೊಂಡಿದ್ದಾರೆ. ಮನೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ಯತ್ನವಾಗಿದ್ದು, ವಿದ್ಯಾರ್ಥಿನಿ ತಪ್ಪಿಸಿಕೊಳ್ಳುವ ಸಲುವಾಗಿ ಕೂಗಾಟ-ಚೀರಾಟ ನಡೆಸಿದ್ದಳು.
ಇದನ್ನೂ ಓದಿ:ನಮಗದು ಚಿನ್ನಕ್ಕಿಂತಲೂ ಹೆಚ್ಚು; ಒಲಿಂಪಿಕ್ಸ್​ ಕುಸ್ತಿಯಲ್ಲಿ ಬೆಳ್ಳಿ ಗೆದ್ದ ರವಿಯ ಗ್ರಾಮಸ್ಥರು ಹೀಗಂದಿದ್ದೇಕೆ?
ಅದೇ ಸಂದರ್ಭದಲ್ಲಿ ಪ್ರಾಧ್ಯಾಪಕರ ಪತ್ನಿ ಲೋಲಾಕ್ಷಿ ಮನೆಗೆ ಬಂದಿದ್ದು, ರಾಮಚಂದ್ರ ರೆಡ್ ಹ್ಯಾಂಡೆಡ್​ ಆಗಿ ಸಿಕ್ಕಿ ಹಾಕಿಕೊಂಡಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಜಯಲಕ್ಷ್ಮೀಪುರಂ ಠಾಣೆಗೆ ದೂರು ನೀಡಿದ್ದಾಳೆ. ಸಂತ್ರಸ್ತೆ ಹಾಗೂ ಪತಿಯನ್ನು ಲೋಲಾಕ್ಷಿ ಠಾಣೆಗೆ ಕರೆದುಕೊಂಡು ಬಂದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯ ಪತ್ನಿ ಲೋಲಾಕ್ಷಿ ಕೂಡ ಮೈಸೂರು ವಿವಿಯಲ್ಲಿ ಪ್ರಾಧ್ಯಾಪಕಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
‘ತಂದೆಗೆ ಒಳ್ಳೆಯ ಮಗಳಾಗಲಿಲ್ಲ, ಗಂಡನಿಗೆ ತಕ್ಕ ಹೆಂಡತಿಯಾಗಲಿಲ್ಲ..’: ಮೋಹನಕುಮಾರಿ ಇನ್ನಿಲ್ಲ…

ನಿಮ್ಮಲ್ಲಿ ಈ ಲಕ್ಷಣಗಳಿದ್ದರೆ ತುರ್ತಾಗಿ ಕರೊನಾ ಲಸಿಕೆ ತೆಗೆದುಕೊಳ್ಳುವುದು ಅನಿವಾರ್ಯ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − three =
Remember me
