ಮಂಡ್ಯ:ಸಕ್ಕರೆ ನಾಡು ಮಂಡ್ಯದ ಮೈಶುಗರ್​ ಸಕ್ಕರೆ ಕಾರ್ಖಾನೆ ಕೋಟಿ ಕೋಟಿ ರೂಪಾಯಿ ಮೊತ್ತದ ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಒಟ್ಟು ಬಾಕಿ ಬಿಲ್ ಮೊತ್ತ ಕೇಳಿದ್ರೆ ಒಂದು ಕ್ಷಣ ಶಾಕ್ ಆಗೋದು ಖಚಿತ!
ಮೈಶುಗರ್​ ಕಾರ್ಖಾನೆ ಎಷ್ಟು ಬಾಕಿ ಉಳಿಸಿಕೊಂಡಿದೆ ಅಂದರೆ, ಬರೋಬ್ಬರಿ 40 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. 2000 ಇಸವಿಯಿಂದಲು ಈ ಕಾರ್ಖಾನೆಯ ಆಡಳಿತ ಮಂಡಳಿ ಕರೆಂಟ್ ಬಿಲ್​ ಅನ್ನೇ ಕಟ್ಟಿಲ್ಲ.
ಅಂದಹಾಗೆ ಮೈಶುಗರ್​ ಸಕ್ಕರೆ ಕಾರ್ಖಾನೆ, ರಾಜ್ಯದ ಏಕೈಕ ಸರ್ಕಾರಿ ಶುಗರ್ ಫ್ಯಾಕ್ಟರಿ. ಇದು ರೋಗಗ್ರಸ್ಥ ಕಾರ್ಖಾನೆ ಎಂದೇ ಬಿಂಬಿಸಿಕೊಂಡಿದೆ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕಾರ್ಖಾನೆ ಆರಂಭಕ್ಕೆ 50 ಕೋಟಿ ರೂ. ಬಿಡುಗಡೆ ಮಾಡಿತ್ತು. ಪ್ರಸಕ್ತ ಸಾಲಿನಲ್ಲಿ 5 ಲಕ್ಷ ಟನ್ ಕಬ್ಬನ್ನು ನುರಿಯುವ ಗುರಿ ಹೊಂದಿದೆ.
ಇದನ್ನೂ ಓದಿ:15,000 ಶಿಕ್ಷಕರ ನೇಮಕಾತಿ ಸದ್ಯಕ್ಕಿಲ್ಲ: ವರ್ಗಾವಣೆ, ಬಡ್ತಿ ಮುಗಿದ ಬಳಿಕ ಆದೇಶ; ಕನಿಷ್ಠ 3 ತಿಂಗಳು ಕಾಯುವ ಅನಿವಾರ್ಯ
ಕಾರ್ಖಾನೆ ಆರಂಭಕ್ಕೆ ಬೇಕಿದೆ ವಿದ್ಯುತ್ ಸರಬರಾಜು. ಇದೀಗ ವಿದ್ಯುತ್ ಪೂರೈಕೆ ಮಾಡುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್​ಗೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ.
ಈ ವರ್ಷ ರೈತರ ಕಬ್ಬು ಅರೆಯಲು ರೈತರೊಂದಿಗೆ ಕಾರ್ಖಾನೆ ಒಪ್ಪಂದ ಮಾಡಿಕೊಂಡಿದೆ. ಮೈಶುಗರ್ ಹಲವು ವರ್ಷದಿಂದ ನಷ್ಟಕ್ಕೆ ಸಿಲುಕಿ 40.86 ಕೋಟಿ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿದೆ. ಪ್ರಸಕ್ತ ಹಂಗಾಮಿನಲ್ಲಿ ಕಬ್ಬನ್ನು ನುರಿಯಲು ಅವಶ್ಯವಿರುವ ವಿದ್ಯುತ್ ಸರಬರಾಜು ಮಾಡಿ. ಹಂತ ಹಂತವಾಗಿ ಬಾಕಿ ಮೊತ್ತ ಪಾವತಿಸಲಾಗುತ್ತದೆ. ವಿದ್ಯುತ್​ ನೀಡಲು ಚೆಸ್ಕಾಂ ನಿರ್ದೇಶಕರಿಗೆ ವಿದ್ಯುತ್ ಆದೇಶಿಸುವಂತೆ ಗೂಳಿಗೌಡ ಮನವಿ ಮಾಡಿದ್ದಾರೆ.(ದಿಗ್ವಿಜಯ ನ್ಯೂಸ್​)
ತ್ಯಾಗೋಜ್ವಲ ಬದುಕಿನ ಸ್ಮರಣೆಯ ಹಬ್ಬ: ಇಂದು ಬಕ್ರೀದ್

ತ್ಯಾಗೋಜ್ವಲ ಬದುಕಿನ ಸ್ಮರಣೆಯ ಹಬ್ಬ: ಇಂದು ಬಕ್ರೀದ್

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fifteen − one =
Remember me
