ರಾಮನಗರ:ಚನ್ನಪಟ್ಟಣಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನಲೆಯಲ್ಲಿ ಮೈಸೂರು ಮತ್ತು ಬೆಂಗಳೂರು ನಡುವಿನ ದಶಪಥ ಹೆದ್ದಾರಿ ಮಾರ್ಗದಲ್ಲಿ ಸಂಚಾರ ಬದಲಾವಣೆ ಆಗಲಿದೆ.
ಏಪ್ರಿಲ್​ 30ರ ಬೆಳಗ್ಗೆ 11 ರಿಂದ ಸಂಜೆ 4 ಗಂಟೆವರೆಗೆ ಎಕ್ಸ್‌ಪ್ರೆಸ್‌ ಹೈವೆ ಬಂದ್ ಆಗಲಿದೆ. ಬೆಂಗಳೂರಿನಿಂದ ಮೈಸೂರಿಗೆ ಹೊರಡುವ ವಾಹನಗಳು ಬಿಡದಿ- ಹಾರೋಹಳ್ಳಿ- ಕನಕಪುರ-ಮಳವಳ್ಳಿ ಮಾರ್ಗವಾಗಿ ಮೈಸೂರು ಪ್ರಯಾಣ ಮಾಡಬಹುದು. ಮೈಸೂರಿನಿಂದ ಬರುವ ವಾಹನಗಳು ಮದ್ದೂರು- ಕುಣಿಗಲ್-ನೆಲಮಂಗಲ ಮಾರ್ಗವಾಗಿ ಬೆಂಗಳೂರಿಗೆ ತಲುಪಬಹುದು.
ಇದನ್ನೂ ಓದಿ:ಮಾಜಿ ಸಿಎಂ ಸಿದ್ದು ತವರಲ್ಲಿ ಬಿಜೆಪಿ ಪ್ರಚಾರ ರಥದ ಮೇಲೆ ಕಲ್ಲು ತೂರಾಟ: ಕಾರ್ಯಕರ್ತನ ಮೇಲೆ ಹಲ್ಲೆ
ಮಾರ್ಗ ಬದಲಾವಣೆ ಮಾಡಿ ರಾಮನಗರ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಏಪ್ರಿಲ್​ 30 ಭಾನುವಾರ ಆಗಿದ್ದು, ಅಂದು ವಾಹನ ದಟ್ಟಣೆ ಹೆಚ್ಚಳವಾಗಿ ಟ್ರಾಫಿಕ್ ಜಾಮ್​ ಉಂಟಾಗುವ ಸಾಧ್ಯತೆ ದಟ್ಟವಾಗಿದೆ.
ಅಂದಹಾಗೆ ಏ.30 ರಂದು ಚನ್ನಪಟ್ಟಣಕ್ಕೆ ಮೋದಿ ಭೇಟಿ ನೀಡಿದರೆ, ಮೇ 4 ರಂದು ಕನಕಪುರಕ್ಕೆ ಅಮಿತ್ ಷಾ ಭೇಟಿ ಕೊಡಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಟೂರ್ ಕೂಡ ಪ್ಲಾನ್ ಆಗುತ್ತಿದೆ. ರಾಮನಗರ ಜಿಲ್ಲೆಯಲ್ಲಿ ನಾಲ್ಕು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಇದೆ ಎಂದು ರಾಮನಗರದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ ಹೇಳಿದರು.(ದಿಗ್ವಿಜಯ ನ್ಯೂಸ್​)
ಕರೆನ್ಸಿ ಟ್ರೇಡಿಂಗ್ ನಡೆಸುವುದಾಗಿ ನಂಬಿಸಿ 31 ಕೋಟಿಗೂ ಅಧಿಕ ಹಣ ವಂಚನೆ: ಇಬ್ಬರ ಬಂಧನ

ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಜಾಗ ಕೇಳಿದ ಕಾನೂನು ವಿವಿ

ತಾಳಿಕೋಟೆಯಲ್ಲಿ ಅಬ್ಬರಿಸಿದ ರಾಜಾಹುಲಿ; ಭಾವೈಕ್ಯತೆ ಸಂದೇಶ ಸಾರಿದ ಬಿಎಸ್​ವೈ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 13 =
Remember me
