ಮೈಸೂರು:ಊಟಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸ್ವಾಮಿಗೌಡ ನಿಧನರಾಗಿದ್ದಾರೆ.
ಗುರುವಾರ ಸಂಜೆ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ದುರ್ಘಟನೆ ಸಂಭವಿಸಿದೆ. ಸ್ನೇಹಿತರ ಕುಟುಂಬದ ಜೊತೆ ಸ್ವಾಮಿಗೌಡ ಪ್ರವಾಸಕ್ಕೆ ತೆರಳಿದ್ದರು. ಅಪಘಾತದಲ್ಲಿ ಸ್ವಾಮಿಗೌಡ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಊಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇದನ್ನೂ ಓದಿ:1 ಲಕ್ಷ ರೂ. ಬೇಕಂತೆ! ವಿಡಿಯೋ ರೆಕಾರ್ಡ್​ ಮಾಡಿದ್ದಕ್ಕೆ ಮಹಿಳಾ ಅಧಿಕಾರಿಯಿಂದ ಅನುಚಿತ ವರ್ತನೆ
ಮೈಸೂರು ಜಿಲ್ಲೆಯಲ್ಲಿ ನದಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ರಾಮಚಂದ್ರ (65) ಎಂದು ಗುರುತಿಸಲಾಗಿದೆ. ಇವರು ಹುಣಸೂರು ನಗರದ ಸರಸ್ವತಿಪುರಂ ನಿವಾಸಿ. ಅನಾರೋಗ್ಯದಿಂದ ಬಳಲುತ್ತಿದ್ದ ರಾಮಚಂದ್ರ, ಲಕ್ಷ್ಮಣ ತೀರ್ಥ ನದಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ. ವಿಶೇಷಚೇತನರಾಗಿದ್ದ ರಾಮಚಂದ್ರಗೆ ಮಾತು ಬರುತ್ತಿರಲಿಲ್ಲ. ಲೋಕೋಪಯೋಗಿ ಇಲಖೆಯಲ್ಲಿ ದಿನಗೂಲಿಯಾಗಿ ಕೆಲಸ ಮಾಡಿಕೊಂಡಿದ್ದ. ಕಳೆದ ಮೂರು ತಿಂಗಳಿನಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಘಟನೆ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಚಾತಕ ಪಕ್ಷಿಯ ಸುತ್ತ ಅಪನಂಬಿಕೆಯ ಗೂಡು!

ಸಂಪಾದಕೀಯ | ರೆಪೊ ದರ ಯಥಾಸ್ಥಿತಿಗೆ; ಸಾಲ ಗ್ರಾಹಕರಿಗೆ ನಿರಾಳ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − eight =
Remember me
