ಮೈಸೂರು:ಕಳೆದ ಕೆಲವು ದಿನಗಳಿಂದ ದಸರಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಇಂದು ಮುಂಜಾನೆ ದಿಢೀರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಜಾನೆ 5 ಗಂಟೆ ಸುಮಾರಿಗೆ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ತೀವ್ರ ಉಸಿರಾಟದ ಸಮಸ್ಯೆ ಎದುರಾದ ಕಾರಣ ಕೂಡಲೇ ಅವರನ್ನು ಸ್ಥಳೀಯ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿರುವ ಅವರಿಗೆ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ.
ಇದನ್ನೂ ಓದಿ:ಅಸ್ಸಾಂ-ಮಿಜೋರಾಂ ಗಡಿಯಲ್ಲಿ ಭುಗಿಲೆದ್ದ ಹಿಂಸಾಚಾರ; ಕೇಂದ್ರದ ನೆರವಿಗೆ ಮೊರೆ
ಮುಂಜಾಗ್ರತಾ ಕ್ರಮವಾಗಿ ಅವರನ್ನು ಕೋವಿಡ್ 19 ಟೆಸ್ಟ್​ಗೂ ಒಳಪಡಿಸಲಾಗಿದೆ. ಇದರ ಫಲಿತಾಂಶ ಇನ್ನೂ ಲಭ್ಯವಾಗಿಲ್ಲ. ಆದಾಗ್ಯೂ, ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸಮಸ್ಯೆ ಪರಿಹರಿಸಲು ವೈದ್ಯರ ತಂಡ ಕಾರ್ಯನಿರತವಾಗಿದೆ ಎಂದು ಅಸ್ಪತ್ರೆ ಮೂಲಗಳು ತಿಳಿಸಿವೆ.
ಎನ್​ಜಿಒ ಹೆಸ್ರಲ್ಲಿ ಇನ್ನು ದುಡ್ಡು ಮಾಡೋದು ಕಷ್ಟ : ಕೇಂದ್ರದ ನಿಗಾದಲ್ಲಿವೆ ಕರ್ನಾಟಕದ 13 ಎನ್​ಜಿಒ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 4 =
Remember me
