ಮೈಸೂರು:ಚಾಮುಂಡಿ ತಪ್ಪಲಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್​ರೇಪ್​ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಪ್ರಕ್ರಿಯೆಗೆ ಸಂತ್ರಸ್ತೆ ಅಸಹಕಾರ ನೀಡುತ್ತಿರುವುದು ಪೊಲೀಸರಿಗೆ ತಲೆನೋವಾಗಿದೆ.
ಪೊಲೀಸ್ ಹೇಳಿಕೆ ನೀಡಲೂ ಸಹ ಸಂತ್ರಸ್ತೆ ನಿರಾಕರಿಸುತ್ತಿದ್ದಾಳೆ. ಇದುವರೆಗೂ ಒಬ್ಬ ಮಹಿಳಾ ಪೊಲೀಸ್ ಅಧಿಕಾರಿಯೊಂದಿಗೆ ಮಾತ್ರ ಆಕೆ ಸಂಭಾಷಣೆ ನಡೆಸಿದ್ದಾಳೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತು ಮಹಿಳಾ ಆಯೋಗದ ರಾಜ್ಯಾಧ್ಯಕ್ಷೆ ಪ್ರಮೀಳಾ ನಾಯ್ಡು ಅವರ ಭೇಟಿಗೂ ಸಂತ್ರಸ್ತೆ ಒಪ್ಪುತ್ತಿಲ್ಲ.
ಸಂತ್ರಸ್ತೆ ನನ್ನನ್ನು ಯಾರೂ, ಏನನ್ನೂ ಕೇಳಬೇಡಿ ಎನ್ನುತ್ತಿದ್ದಾಳೆ. ಆಕೆಯ ತಂದೆ-ತಾಯಿಯಿಂದಲೂ ಕೂಡ ನಿರೀಕ್ಷಿತ ನೆರವು ಸಿಗುತ್ತಿಲ್ಲ. ಅವರ ಮನವೊಲಿಕೆಗೆ ಪ್ರಯತ್ನಿಸಿ ಹೈರಾಣಾಗಿರುವ ತನಿಖಾಧಿಕಾರಿಗಳು ಅನಿವಾರ್ಯವಾಗಿ ಸಂತ್ರಸ್ತೆಯ ಸ್ನೇಹಿತನಿಗೆ ದುಂಬಾಲು ಬಿದ್ದಿದ್ದಾರೆ. ಈ ವಿಚಾರಗಳನ್ನು ಪರೋಕ್ಷವಾಗಿ ಎಡಿಜಿಪಿ ಪ್ರತಾಪ್ ರೆಡ್ಡಿ ಒಪ್ಪಿಕೊಂಡಿದ್ದಾರೆ.
ಸಂತ್ರಸ್ತೆಯಿಂದ ನಮಗೆ ಯಾವುದೇ ಮಾಹಿತಿ ಸಿಕಿಲ್ಲ. ಸಂತ್ರಸ್ತೆಯ ಸ್ನೇಹಿತನಿಂದ ಮಾಹಿತಿ ಪಡೆದಿದ್ದೇವೆ. ಅವುಗಳ ಆಧಾರದ ಮೇಲೆ ಇಲಾಖೆ ವತಿಯಿಂದಲೇ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ ಹೇಳಿಕೆ ನೀಡಿದ್ದಾರೆ.(ದಿಗ್ವಿಜಯ ನ್ಯೂಸ್​)
ನನ್ನನ್ನು ತಳ್ಳಿ ಗೆಳತಿಯನ್ನು ಪೊದೆಯತ್ತ ಎಳೆದೊಯ್ದರು… ​ ಸಂತ್ರಸ್ತೆಯ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ಹುಡುಗ-ಹುಡುಗಿಯರನ್ನು ಬೆತ್ತಲೆ ನೋಡ್ಬಹುದು! ಚಾಮುಂಡಿ ಬೆಟ್ಟದ ತಪ್ಪಲಿನ ಕರಾಳತೆ ಬಿಚ್ಚಿಟ್ಟ ನಿವೃತ್ತ ಅಧಿಕಾರಿ

ಮೈಸೂರಲ್ಲಿ ಗ್ಯಾಂಗ್​ ರೇಪ್​: ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಕಾಮುಕರು, ರಾತ್ರಿವರೆಗೂ ಕಾದು ಅಟ್ಟಹಾಸ ಮೆರೆದ್ರು…

ಪುಡಾರಿಗಳ ಅಡ್ಡೆಯಾದ ಚಾಮುಂಡಿ ಬೆಟ್ಟದ ತಪ್ಪಲು: ಗ್ಯಾಂಗ್​ರೇಪ್​ ಜಾಗದಲ್ಲಿ ಮದ್ಯದ ಬಾಟಲಿ, ಕಾಂಡೋಮ್ ಪತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 15 =
Remember me
