ಮೈಸೂರು:ವರದಕ್ಷಿಣೆ ಕಿರುಕುಳ ತಾಳಲಾರದೆ ಗರ್ಭಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಣಸೂರು ಪಟ್ಟಣದ ಕಲ್ಕುಣಿಕೆಯಲ್ಲಿ ನಡೆದಿದೆ.
ಲಕ್ಷ್ಮೀ(23) ಆತ್ಮಹತ್ಯೆಗೆ ಶರಣಾದ ಗರ್ಭಿಣಿ. ನಂಜನಗೂಡು ತಾಲೂಕಿನ ಮಂಚಳ್ಳಿ ಗ್ರಾಮದ ನಿವಾಸಿಯಾದ ಲಕ್ಷ್ಮೀ 10 ತಿಂಗಳ ಹಿಂದೆ ಹುಣಸೂರಿನ ಯೋಗೇಶ್ ಜತೆ ಮದುವೆಯಾಗಿದ್ದರು.
ಮದುವೆ ವೇಳೆ ಲಕ್ಷ್ಮೀ ಪಾಲಕರು ವರದಕ್ಷಿಣೆಯಾಗಿ 50 ಲಕ್ಷ ರೂ. ನಗದು ಮತ್ತು 400 ಗ್ರಾಂ ಚಿನ್ನ ನೀಡಿದ್ದರು. ಅಲ್ಲದೆ, ಒಂದು ನಿವೇಶನ ನೀಡಲು ಒಪ್ಪಿಕೊಂಡಿದ್ದರು ಎನ್ನಲಾಗಿದೆ. ಆದರೆ, ನಿವೇಶನ ನೀಡುವುದು ವಿಳಂಬವಾದ ಹಿನ್ನೆಲೆಯಲ್ಲಿ ಲಕ್ಷ್ಮೀಗೆ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಹೀಗಾಗಿ ಗಂಡನ ಮನೆಯವರ ನಿರಂತರ ಕಿರುಕುಳದಿಂದ ಬೇಸತ್ತು ಲಕ್ಷ್ಮೀ ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಪತ್ನಿ ಬೆಂಬಲದಿಂದ ಮಕ್ಕಳಿಂದಿಡಿದು ಮಹಿಳೆ, ಪುರುಷರ ಮೇಲೂ ಪಾದ್ರಿಯಿಂದ ರೇಪ್​: ವಿಚಾರಣೆಯಲ್ಲಿ ಆತಂಕಕಾರಿ ಮಾಹಿತಿ ಸ್ಪೋಟ

ಕಾರು ಮರಕ್ಕೆ ಡಿಕ್ಕಿಯಾಗಿ ಮೂವರು ಸರ್ಕಾರಿ ಸೌಕರರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 10 =
Remember me
