ಮೈಸೂರು:ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜೂನ್​ 14ರ ನಂತರವೂ ಲಾಕ್​ಡೌನ್​ ಮುಂದುವರಿಯಲಿದೆ ಎಂದು ಉಸ್ತುವಾರಿ ಸಚಿವ ಎಸ್​.ಟಿ. ಸೋಮಶೇಖರ್​ ಘೋಷಣೆ ಮಾಡಿದ್ದಾರೆ.
ಜೂ.14ರಿಂದ ಮತ್ತೆ ಒಂದು ವಾರಗಳ ಕಾಲ ಅಂದರೆ ಜೂನ್​ 21ರ ವರೆಗೆ ಮೈಸೂರಿನಲ್ಲಿ ಲಾಕ್‌ಡೌನ್ ಮುಂದುವರಿಯಲಿದೆ ಎಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಎಸ್​.ಟಿ. ಸೋಮಶೇಖರ್​ ಹೇಳಿದರು.
ಕರೊನಾ ನಿಯಂತ್ರಣಕ್ಕಾಗಿ ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಜೂನ್ 14ರ ನಂತರವೂ ಮೈಸೂರಿನಲ್ಲಿ ಲಾಕ್‌ಡೌನ್ ಮುಂದುವರಿಯಲಿದೆ. ಆದರೆ ಯಾವುದಕ್ಕೆ ವಿನಾಯಿತಿ ಕೊಡಬೇಕು ಎಂಬುದರ ಕುರಿತು ಚರ್ಚಿಸಿ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಆದೇಶ ಹೊರಡಿಸಲಿದ್ದಾರೆ ಎಂದರು.
ಅಲ್​ಲಾಕ್ ಮಾಡಬೇಕಿದ್ರೆ ಶೇ.5 ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರಬೇಕು ಅನ್ನುವ ನಿಯಮ ಇದೆ. ಮೈಸೂರಿನಲ್ಲಿ ಈಗ ಶೇ.20 ರಷ್ಟು ಪಾಸಿಟಿವಿಟಿ ರೇಟ್ ಇದೆ. ಇದನ್ನು ಅತೀ ಶೀಘ್ರದಲ್ಲಿ ಶೇ.5 ಕ್ಕಿಳಿಸುವ ನಿಟ್ಟಿನಲ್ಲಿ ಪ್ರಯತ್ನಗಳಾಗಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ, ಜಿ.ಪಂ. ಸಿಇಒ ಹಾಗೂ ಎಸ್ಪಿ ಒಂದೇ ಕಾರಿನಲ್ಲಿ ಕ್ಷೇತ್ರ ಸಂಚಾರ ಮಾಡಲಿದ್ದಾರೆ. ಮೈಸೂರಿನ ಎಲ್ಲ 11 ಕ್ಷೇತ್ರಗಳಿಗೂ ಒಟ್ಟಿಗೆ ಭೇಟಿ ಕೊಟ್ಟು ಕರೊನಾ ಪರಿಸ್ಥಿತಿ ತಹಬದಿಗೆ ತರಲಿದ್ದಾರೆ ಎಂದು ಸಭೆ ಬಳಿಕ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.(ದಿಗ್ವಿಜಯ ನ್ಯೂಸ್​)
5 ರೂಪಾಯಿ ನೋಟು ವಿನಿಮಯ ಮಾಡಿ 30 ಸಾವಿರ ರೂ. ಸಂಪಾದಿಸಿ! ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ

ಐದು ಹೆಣ್ಣು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ಮಹಿಳೆ! ಕಂಠ ಪೂರ್ತಿ ಕುಡಿದು ಬರುತ್ತಿದ್ದವ ಈಗ ಒಬ್ಬಂಟಿ

ನಟ ಸುಶಾಂತ್​ ಸಿಂಗ್ ಬಗೆಗಿನ ಚಲನಚಿತ್ರ ಬಿಡುಗಡೆಗೆ ತಡೆ ಇಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
