ಮಂಡ್ಯ:ಸಂಸದೆ ಸುಮಲತಾ ಅಂಬರೀಷ್​ ನಡೆಯನ್ನು ಟೀಕಿಸಿರುವ ಮೈಸೂರು-ಕೊಡುಗು ಸಂಸದ ಪ್ರತಾಪ್​ ಸಿಂಹ, ಸುಮಲತಾ ಅವರು ಏನೂ ಕೆಲಸ ಮಾಡಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.
ದೇವೇಗೌಡರ ಕುಟುಂಬದವರನ್ನು ಸೋಲಿಸಲು ಸುಮಲತಾ ಅವರನ್ನು ಗೆಲ್ಲಿಸಿದ್ದಾರಷ್ಟೇ. ಮಂಡ್ಯದಲ್ಲಿ ಒಂದು ಕೆಲಸ ಮಾಡುವುದಕ್ಕೂ ಬಿಡುತ್ತಿಲ್ಲ. ಮಂಡ್ಯದ ಯಾವುದೇ ಕೆಲಸ ಇದ್ದರೂ ನನಗೆ ಹೇಳಿ, ಆ ಯಮ್ಮ ಏನೂ ಕೆಲಸ ಮಾಡುವುದಿಲ್ಲ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.
ಇದನ್ನೂ ಓದಿ:ನಟ ವಿನೋದ್​ರಾಜ್ ಹೆಸರಲ್ಲಿ ನಕಲಿ ಖಾತೆ; ಅಶ್ಲೀಲ ಫೋಟೋ ಅಪ್​ಲೋಡ್​
ಈ ಸಂಬಂಧ ವಿಡಿಯೋವೊಂದು ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರು–ಮೈಸೂರು ದಶಪಥ ಕಾಮಗಾರಿಯ ಬಗ್ಗೆ ಅಧಿಕಾರಿಯೊಬ್ಬರ ಜತೆ ಫೋನ್‌ನಲ್ಲಿ ಮಾತನಾಡುವ ವೇಳೆ ಸುಮಲತಾ ವಿರುದ್ಧ ಅಧಿಕಾರಿ ದೂರು ಹೇಳಿದಾಗ ಅವರ ವಿರುದ್ಧ ಪ್ರತಾಪ್​ ಸಿಂಹ ಮಾತನಾಡಿದ್ದಾರೆ.
ಮಂಡ್ಯ ತಾಲೂಕಿನ ಯಲಿಯೂರು ಗ್ರಾಮಸ್ಥರ ಅಹವಾಲು ಸ್ವೀಕರಿಸಿ, ಅಧಿಕಾರಿ ಜತೆ ಫೋನ್​ನಲ್ಲಿ ಮಾತನಾಡುವಾಗ ಈ ಪ್ರಸಂಗ ಜರುಗಿದೆ. ಇದೀಗ ಪ್ರತಾಪ್ ಸಿಂಹ ವಿರುದ್ಧ ಸುಮಲತಾ ಬೆಂಬಲಿಗರು ಆಕ್ರೋಶ ಹೊರಹಾಕುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಟೀಕಾ ಪ್ರಹಾರ ನಡೆಸುತ್ತಿದ್ದಾರೆ.(ದಿಗ್ವಿಜಯ ನ್ಯೂಸ್​)
ಸಹಕಾರ ವಿಶ್ವವಿದ್ಯಾಲಯ ಸ್ಥಾಪನೆಗೆ ಯತ್ನ – ‘ಆತ್ಮನಿರ್ಭರ’ ಗುರಿ ಸಾಧನೆಗೆ ಆದ್ಯತೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 − 9 =
Remember me
