ಮೈಸೂರು:ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದಿರುವ ಘಟನೆ ತಿ.ನರಸೀಪುರ ತಾಲೂಕಿನ ವಾಟಾಳು ಗ್ರಾಮದಲ್ಲಿ ನಡೆದಿದೆ.
ವಾಟಾಳು ಗ್ರಾಮದ ನಿವಾಸಿ ಕುಮಾರ್ ಆರೋಪಿ. ಅದೇ ಗ್ರಾಮದ ಸಿಪಾಯಿ ಗಾಯಗೊಂಡವರು. ಕುಮಾರ್ ಪತ್ನಿಯ ಜತೆ ಸಿಪಾಯಿ ಅಕ್ರಮ ಸಂಬಂಧ ಹೊಂದಿದ್ದಾನೆಂಬ ಗುಸುಗುಸು ಊರಿನಲ್ಲಿ ಕೇಳಿಬಂದಿತ್ತು. ಇದರಿಂದ ಕುಪಿತಗೊಂಡ ಕುಮಾರ್​, ಸಿಪಾಯಿ ಮೇಲೆ ಹಲ್ಲೆಗೆ ಮುಂದಾಗಿ ಚಾಕು ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಸಿಪಾಯಿಯನ್ನು ಸ್ಥಳೀಯರು ತಕ್ಷಣ ಮೈಸೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಸಿಪಾಯಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಘಟನೆ ಬೆನ್ನಲ್ಲೇ ಕುಮಾರ್​ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಘಟನಾ ಸ್ಥಳಕ್ಕೆ ತಿ. ನರಸೀಪುರ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಕರೊನಾ 2ನೇ ಅಲೆ ಮಧ್ಯೆಯೇ ಬಿಹಾರದಲ್ಲಿ 75 ಸಾವಿರ ಲೆಕ್ಕವಿಲ್ಲದ ಸಾವುಗಳು: ಪ್ರಶ್ನೆ ಹುಟ್ಟುಹಾಕಿದ ದತ್ತಾಂಶ

‘ಜಗತ್ತನ್ನೇ ಬದಲಿಸುವ ವ್ಯಕ್ತಿ ನೀವು.. ‘ ರಾಹುಲ್ ಗಾಂಧಿ ಬರ್ತ್​ಡೇಗೆ ಸ್ಪೆಷಲ್​ ವಿಷ್ ಮಾಡಿದ ರಮ್ಯಾ

ನಿನ್ನ ಜತೆ ಸೆಕ್ಸ್​ ಮಾಡಿದ್ದೀನಿ, ಆ ಭಾಗವನ್ನು ತುಂಬಾ ಇಷ್ಟಪಡ್ತೇನೆ! ಅರಿಯಾನಾಗೆ ಶಾಕ್​ ಕೊಟ್ಟ ಆರ್​ಜಿವಿ​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
