ಮೈಸೂರು:ಚಾಮರಾಜನಗರ ಆಕ್ಸಿಜನ್​ ದುರಂತ ನಡೆದಾಗ ನನ್ನ ವಿರುದ್ಧ ಆರೋಪ ಮಾಡಿದವರು ಕ್ಷಮೆ ಕೇಳಲಿ ಎಂಬ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿಕೆಗೆ ಮಾಜಿ ಸಚಿವ ಸಾ.ರಾ. ಮಹೇಶ್ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ​
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಸಾ.ರಾ. ಮಹೇಶ್​, ಒಬ್ಬ ಕನ್ನಡಿಗ ದಲಿತ ಡಿಸಿಯನ್ನು ಕೇವಲ 28 ದಿನಕ್ಕೆ ವರ್ಗಾವಣೆ ಮಾಡಿಸಿದ್ದು ಸುಳ್ಳಾ? ಎಂದು ಪ್ರಶ್ನೆಯನ್ನು ಆರಂಭಿಸಿದರು.
ಪ್ರಶ್ನೆಗಳ ಸವಾಲನ್ನು ಮುಂದುವರಿಸಿದ ಸಾ.ರಾ.ಮಹೇಶ್​, ಹಾಸನದ ಪ್ರಕರಣದಲ್ಲಿ ತಕ್ಷಣ ನಿಮ್ಮ ಪರ ತೀರ್ಪು ಬಂತು. ಈಗ ಅದರ ತೀರ್ಪು ಬರದಂತೆ ಸಿಎಟಿ ಮ್ಯಾನೇಜ್ ಮಾಡಿದ್ದು ಸುಳ್ಳಾ? ವಾಲ್ಮೀಕಿ ಜಯಂತಿ ಆಚರಣೆಗೆ ಬರಲಿಲ್ಲ. ಬದಲಾಗಿ ಬಂಡೀಪುರಕ್ಕೆ ಹೋಗಿದ್ದು ಸುಳ್ಳಾ? ಎಂದು ಪ್ರಶ್ನೆ ಮಾಡಿದರು.
ಮಾತ್ರೆ ಕೊಡಲು ದುಡ್ಡಿಲ್ಲ. ಕರೊನಾ ಸಂದರ್ಭದಲ್ಲಿ ಇನ್ ಡೋರ್ ಜಿಮ್, ಸ್ವಿಮ್ಮಿಂಗ್ ಪೂಲ್ ಕಟ್ಟಿಸಿರುವುದು ಸುಳ್ಳಾ? ಅದು ಪಾರಂಪರಿಕ ಕಟ್ಟಡದಲ್ಲಿ ಈಜುಕೊಳಕ್ಕೆ ಅನುಮತಿ ಕೊಟ್ಟವರು ಯಾರು? ಇದಕ್ಕೆ ಹಣ ಎಲ್ಲಿಂದ ಬಂತು? ಅದು ಕಟ್ಟಿರೋದು ಸುಳ್ಳಾ? ರಾಜ್ಯದ ಸಿಎಂ ಮತ್ತು ರಾಷ್ಟ್ರದ ಪಿಎಂ ಮನೆಯಲ್ಲಿ ಈಜುಕೊಳ ಇದೆಯಾ? ರಾಜ್ಯ ಮುಖ್ಯ ಕಾರ್ಯದರ್ಶಿ ಮನೆಯಲ್ಲಿ ಇದೆಯಾ? ನಾವು-ನೀವು ಜನರಿಗೆ ಮಾದರಿಯಾಗಿರಬೇಕು ಎಂದು ಸಲಹೆ ನೀಡಿದರು.
ಕರ್ನಾಟಕದ ಹಣ ತಿರುಪತಿಗೆ ಕೊಟ್ಟಿದ್ದು ಸುಳ್ಳಾ? ಐಎಎಸ್ ಅಧಿಕಾರಿಗಳ ಬೇಜವಾಬ್ದಾರಿಯಿಂದ ರಾಜ್ಯ ಹೊತ್ತಿ ಉರಿದಿದ್ದು ಸುಳ್ಳಾ? ಈಜುಕೊಳದ 50 ಲಕ್ಷ ರೂ. ಕರೊನಾಗೆ ಬಳಸಬೇಕಿತ್ತು. ನಿಮ್ಮನ್ನು ಯಾರೂ ಪ್ರಶ್ನೆ ಮಾಡಲೇಬಾರದ? ಇಂತಹ ಪರಿಸ್ಥಿತಿಯಲ್ಲೂ ಮೈಸೂರಿನಲ್ಲಿ ಶಾಸಕರು, ಪಾಲಿಕೆ ಸದಸ್ಯರು ಕೆಲಸ ಮಾಡುತ್ತಿರುವುದಕ್ಕೆ ಕೇಳಬೇಕಾ? ಇದಕ್ಕೆ ಸೂಕ್ತ ವೇದಿಕೆಯಲ್ಲಿ ತಕ್ಕ ಉತ್ತರ ನೀಡುವೆ ಎಂದು ಸವಾಲು ಎಸೆದರು.
ಇದೆಲ್ಲ ಏನೇ ಇರಲಿ ನೊಂದವರ ನಿಟ್ಟುಸಿರು ತಟ್ಟದೆ ಬಿಡುವುದಿಲ್ಲ ಎಂದು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾ.ರಾ.ಮಹೇಶ್ ಸಿಡಿಮಿಡಿಗೊಂಡರು.(ದಿಗ್ವಿಜಯ ನ್ಯೂಸ್​)
‘ರಾಧೆ ಪೈರೆಸಿಯಲ್ಲಿ ತೊಡಗಬೇಡಿ, ತೊಂದರೆಗೆ ಸಿಲುಕುತ್ತೀರಿ’ ಎಂದ ಸಲ್ಮಾನ್

ಎರಡನೇ ವಿವಾಹವಾಗಿದ್ದ ವಿಚ್ಛೇದಿತೆಗೆ ಎಂಜಲು ನೆಕ್ಕುವ ಶಿಕ್ಷೆ! ಮಹಾರಾಷ್ಟ್ರದಲ್ಲಿ ಆಘಾತದ ಘಟನೆ

ತನ್ನೊಂದಿಗೆ ಮಲಗುವಂತೆ ನಟಿಗೆ ಆಹ್ವಾನ ನೀಡಿದ ಪ್ರಾಧ್ಯಾಪಕ: ಜಾಲತಾಣದಲ್ಲಿ ಅಳಲು ತೋಡಿಕೊಂಡ ನಟಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 + six =
Remember me
