ಮೈಸೂರು:ಮೈಸೂರು ತಾಲೂಕಿನ ದೊಡ್ಡ ಕಾನ್ಯ ಗ್ರಾಮದಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು, ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಹೆತ್ತವರೇ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮೀನಾಕ್ಷಿ (22) ಮೃತ ಯುವತಿ. ಪ್ರೀತಿ ವಿಚಾರ ತಿಳಿಸಿದ ನಂತರ ಮನೆಯವರು ಯುವತಿಗೆ ಮಾನಸಿಕ ಹಿಂಸೆ ನೀಡಿದ್ದಾರೆನ್ನಲಾಗಿದೆ. ಯುವತಿ ಬದುಕಿದ್ದಾಗ ಹಿಂಸೆಯ ಬಗ್ಗೆ ಮೈಸೂರು ಎಸ್ಪಿ ಹಾಗೂ ಒಡನಾಡಿ ಸಂಸ್ಥೆಗೆ ಇ-ಮೇಲ್ ಮೂಲಕ ದೂರು ನೀಡಿದ್ದಳು. ಇದಕ್ಕೆ ಸಂಬಂಧಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಆಗಿದೆ.
ಇದನ್ನೂ ಓದಿ:ಹೀಗೆ ಆದರೆ ಸುಶಾಂತ್ ರೀತಿ ನಾನು ಸೂಸೈಡ್ ಮಾಡ್ಕೋಬೇಕಾಗುತ್ತೆ…!
ಕಳೆದ ಬುಧವಾರ ಸಂಜೆ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಮನೆಯಲ್ಲೇ ಪತ್ತೆಯಾಗಿದೆ. ಇದಕ್ಕೂ ಮುನ್ನ ನನ್ನ ಅಣ್ಣ ತೀವ್ರ ಹಲ್ಲೆ ಮಾಡಿ ಕತ್ತು ಹಿಸುಕಿ ಸಾಯಿಸಲು ಯತ್ನಿಸಿದ. ಇದನ್ನು ನಮ್ಮ ಮನೆಯವರು ತಡೆಯಲಿಲ್ಲ ಎಂದು ದೂರಿನಲ್ಲಿ ಯುವತಿ ಅಳಲು ತೋಡಿಕೊಂಡಿದ್ದಳು.
ನಾನು ಗೃಹ ಬಂಧನಲ್ಲಿರುವೆ. ನನಗೆ ಜೀವ ಭಯವಿದೆ. ನನ್ನನ್ನು ಕಾಪಾಡಿ ಎಂದು ಮನವಿ ಮಾಡಿದ್ದಳು. ಜೂನ್ 16 ಹಾಗೂ ಆಗಸ್ಟ್ 6ರಂದು ಎರಡು ಬಾರಿ ಎಸ್ಪಿಗೆ ಯುವತಿ ದೂರು ನೀಡಿದ್ದಾಳೆ. ಅನ್ಯ ಜಾತಿ ಯುವಕನನ್ನು ಮದುವೆ ಆಗುತ್ತೇನೆಂದು ಪಟ್ಟು ಹಿಡಿದ್ದಿದ್ದ ಮೀನಾಕ್ಷಿಯನ್ನು ಹೆತ್ತವರೇ ಹತ್ಯೆ ಮಾಡಿರುವ ಶಂಕೆ ಇದೀಗ ವ್ಯಕ್ತವಾಗಿದೆ.
ಸದ್ಯ ಮೈಸೂರು ದಕ್ಷಿಣ ಗ್ರಾಮಾಂತರ ಠಾಣಾ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
‘ನಶೆ’ಯ ನಗ್ನ ಸತ್ಯ; ಸುದ್ದಿಗೋಷ್ಠಿಯಲ್ಲಿ ​ಸ್ಫೋಟಕ ಮಾಹಿತಿ ನೀಡಿದ್ರು ಪೊಲೀಸ್​ ಕಮಿಷನರ್

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seven − two =
Remember me
