ಬೆಂಗಳೂರು:ಕಾಂಗ್ರೆಸ್ ಪಾಲಿಗೆ ಕರ್ನಾಟಕ ಸರ್ಕಾರ ಖಜಾನೆ ಇದ್ದಂತೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಆರೋಪಿಸಿದ್ದಾರೆ.
ಇದನ್ನೂ ಓದಿ:ಇವರಿಂದ ಹೇಳಿಸಿಕೊಂಡು ಬುದ್ದಿ ಕಲಿಯುವ ಪರಿಸ್ಥಿತಿ ಯಾರಿಗೂ ಬಂದಿಲ್ಲ; ಕಾಂಗ್ರೆಸ್​​ಗೆ ಬಿಜೆಪಿ ಟಾಂಗ್!ಈ ಬಗ್ಗೆ ಮಾತನಾಡಿರುವ ಎನ್.ರವಿಕುಮಾರ್, “ಸಿದ್ದರಾಮಯ್ಯನವರು ಅಧಿಕೃತವಾಗಿ ಮತ್ತು ಅನಧಿಕೃತವಾಗಿ ವಸೂಲಿ ಮಾಡುವ ತೆರಿಗೆ ಕುರಿತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಿಳಿದಿದೆ. ಸಿದ್ದರಾಮಯ್ಯ ಅವರು ದೇವೇಗೌಡರು ಮತ್ತು ಕುಮಾರಸ್ವಾಮಿಯವರ ಜೊತೆಗೆ ಇದ್ದವರು. ಹಾಗಾಗಿ ಸಿದ್ದರಾಮಯ್ಯ ಏನೆಂದು ಅವರಿಗೆ ಸರಿಯಾಗಿ ಗೊತ್ತಿದೆ” ಎಂದು ಹೇಳಿದರು.
ವೈಎಸ್‍ಟಿ ತೆರಿಗೆ ವಿಷಯವನ್ನು ಮುನ್ನೆಲೆಗೆ ತಂದ ಕುಮಾರಸ್ವಾಮಿಗೆ ಅಭಿನಂದನೆಗಳು ಎಂದು ಹೇಳಿದ ಎನ್.ರವಿಕುಮಾರ್, “ಸಿದ್ದರಾಮಯ್ಯ ಅವರು ಹಾಕಿದ ತೆರಿಗೆಯನ್ನು ಯತೀಂದ್ರ ವಸೂಲಿ ಮಾಡುತ್ತಿದ್ದಾರೆ. ಮೈಸೂರು, ಹುಬ್ಬಳ್ಳಿ ಮತ್ತಿತರ ಕಡೆ ಹಾಗೂ ರಾಜ್ಯದ ವಿವಿದೆಡೆ ಇದರ ಕುರಿತು ಮಾತನಾಡುತ್ತಿದ್ದಾರೆ. ಕೇವಲ ವೈಎಸ್‍ಟಿ ಮಾತ್ರವಲ್ಲ, ವಿಎಸ್‍ಟಿಯೂ ಇದೆ. ವೇಣುಗೋಪಾಲ್-ಸಿದ್ದರಾಮಯ್ಯ ಟ್ಯಾಕ್ಸ್ ಕೂಡ ಇದೆ. ವಿಎಸ್‍ಟಿಯನ್ನು ವೇಣುಗೋಪಾಲ್ ಸಂಗ್ರಹಿಸುತ್ತಾರೆ. ಹಾಗಾಗಿ ಇದು ವಿಎಸ್‍ಟಿ ಸರಕಾರ” ಎಂದು ಆರೋಪಿಸಿದರು.
ಇದನ್ನೂ ಓದಿ:ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ಅಗತ್ಯ: ರೈತ ಹನುಮಂತಪ್ಪಗೌಡ ಅನಿಸಿಕೆ
“ಇಲ್ಲಿ ಸಿದ್ದರಾಮಯ್ಯ ಅವರು ವಿಧಿಸಿದ ತೆರಿಗೆಯನ್ನು ವೇಣುಗೋಪಾಲ್ ಡ್ರಾ ಮಾಡುತ್ತಾರೆ. ಕಾಂಗ್ರೆಸ್ ಪಾಲಿಗೆ ಕರ್ನಾಟಕ ಸರಕಾರ ಖಜಾನೆ ಇದ್ದಂತೆ. ಈ ಗ್ಯಾರಂಟಿ ಎಂದರೆ ಒಂದು ಕೈಯಲ್ಲಿ ತೆಗೆದುಕೊಂಡು ಇನ್ನೊಂದು ಕೈಯಲ್ಲಿ ಕೊಡುವುದು” ಎಂದು ಹೇಳುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಎನ್.ರವಿಕುಮಾರ್ ಆರೋಪಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
