ಬೆಂಗಳೂರು:ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜ್ಯ ಸರ್ಕಾರದ ವಿರುದ್ಧ ಸರಣಿ ಆರೋಪಗಳನ್ನು ಎಸಗಿದ್ದಾರೆ.
ಇದನ್ನೂ ಓದಿ:ಆಡಳಿತ ವ್ಯವಸ್ಥೆಯಲ್ಲಿ ಕಂದಾಯ ಇಲಾಖೆ ಪಾತ್ರ ಪ್ರಮುಖ
“ರಾಜ್ಯ ಸರ್ಕಾರ ಕರೆಂಟ್ ವಿಚಾರದಲ್ಲೂ ಮೋಸ ಮಾಡುತ್ತಿದೆ. ಭರವಸೆಯಂತೆ 200 ಯೂನಿಟ್ ಉಚಿತ ವಿದ್ಯುತ್ ಕೊಡಬೇಕು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮಹಿಳೆಗೆ 2 ಸಾವಿರ ಎಂದು ಹೇಳಿ ತದನಂತರ ಮನೆಯೊಡತಿಗೆ ಎಂದು ಬದಲಿಸಿ ಇಂದು ಮನೆಮನೆಯಲ್ಲೂ ಜಗಳ ತಂದಿಟ್ಟಿದೆ” ಎಂದು ಆರೋಪಿಸಿದರು.
ಇದನ್ನೂ ಓದಿ:ವಚನ ಸಾಹಿತ್ಯ ಸಂರಕ್ಷಣೆಗೆ ಹಳಕಟ್ಟಿ ಕೊಡುಗೆ ಅಪಾರ, ಡಾ. ಸಿ. ಕೆ. ನಾವಲಗಿ ಮೆಚ್ಚುಗೆ
“ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯಿಂದ ಬಸ್‍ಗಳು ರಶ್ ಆಗುತ್ತಿವೆ. ಶಾಲಾ ಮಕ್ಕಳು ಬಸ್ ಹತ್ತಲಾಗುತ್ತಿಲ್ಲ. ವಿದ್ಯಾರ್ಥಿಗಳು ಶಾಲಾ- ಕಾಲೇಜಿಗೆ ಹೋಗಲಾಗದ ದುಸ್ಥಿತಿ ಎದುರಾಗಿದೆ. ಮಕ್ಕಳ ಕಣ್ಣೀರು, ಯುವಕರ ಕಣ್ಣೀರು ಈ ಸಿದ್ದರಾಮಯ್ಯ ಸರಕಾರಕ್ಕೆ ತಟ್ಟಲಿದೆ. 5 ಗ್ಯಾರಂಟಿ ಯೋಜನೆಗಳ ಷರತ್ತುಗಳನ್ನು ಶೀಘ್ರವೇ ತೆಗೆದುಹಾಕಿ” ಎಂದು ಆಗ್ರಹಿಸಿದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − eight =
Remember me
