ಬೆಂಗಳೂರು:ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ,  ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ  ಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಾದಿತ ಆದೇಶವನ್ನು ಹೊರಡಿಸಿದೆ.
ಈ ಹಿಂದೆ ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು.

ಈ ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ ಈಗ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.
ಖಾಸಗಿ ಶಾಲೆಗಳಲ್ಲಿ(Private Schools)ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆಯನ್ನು ರಾಜ್ಯ ಸರ್ಕಾರ ಫೆಬ್ರವರಿ 16ರಂದು ಹೊರಡಿಸಿರುವುದು ಇದೀಗ ತಿಳಿದುಬಂದಿದೆ. ರಾಜ್ಯ ಸರ್ಕಾರದ ಈ ನಡೆ ಕೂಡ ವಿರೋಧಕ್ಕೆ ಗುರಿಯಾಗುವ ಸಾಧ್ಯತೆಗಳಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − three =
Remember me
