ರಾಮನಗರ:ಹಂದಿ ಬೇಟೆಯಾಡಲು ಬಳಸುತ್ತಿದ್ದ ನಾಡಬಾಂಬ್​ ಸ್ಪೋಟಗೊಂಡ ಪರಿಣಾಮ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಹಾರೋಬೆಲೆ ಗ್ರಾಮದಲ್ಲಿ ನಡೆದಿದೆ.
ಸಚಿನ್​ ಕುಮಾರ್​(27) ನಾಡಬಾಂಬ್​ ಸಿಡಿದು ಗಂಭೀರವಾಗಿ ಗಾಯಗೊಂಡಿರುವ ಯುವಕ. ಸಾತನೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಯಾಳುವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಮನೆಯಲ್ಲೇ ತಯಾರಿಸಿದ್ದ ನಾಡಬಾಂಬ್ಅನ್ನು​ ಹಂದಿ ಬೇಟೆಯಾಡಲು ಉಪಯೋಗಿಸಲಾಗುತ್ತಿತ್ತು ಎಂದು ಹೇಳಲಾಗಿದೆ. ಸ್ಪೋಟದ ತೀವ್ರತೆಗೆ ಯುವಕನ ಕೈ ಬೆರಳುಗಳು ಛಿದ್ರವಾಗಿದ್ದು, ಗಾಯಾಳುವನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ಧಾರೆ. ಸ್ಥಳಕ್ಕೆ ಭೇಟಿ ನೀಡಿದ ಸಾತನೂರು ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ರೈತರಿಗೆ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ನೀಡಿರಿ; ಬೆಂಗಳೂರು ಕೃಷಿ ವಿವಿಗೆ ರಾಜ್ಯಪಾಲರ ಸಲಹೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 17 =
Remember me
