ಬೆಂಗಳೂರು:ನಾಡಪ್ರಭು ಕೆಂಪೇಗೌಡ ಅವರ 514ನೇ ಜಯಂತಿ ಅಂಗವಾಗಿ ವಿಧಾನಸೌಧದಲ್ಲಿರುವ ಕೆಂಪೇಗೌಡ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಇದೇ ವೇಳೆ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಮಾಜಿ ಸಚಿವ ಎಚ್​.ಎಮ್.ರೇವಣ್ಣ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಉಪಸ್ಥಿತರಿದ್ದರು.
ನಾಡಪ್ರಭು ಕೆಂಪೇಗೌಡ ಜಯಂತಿ ಪ್ರಯುಕ್ತ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕೆಂಪೇಗೌಡರ ಪ್ರತಿಮೆಗೆ ಸಚಿವ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಪುಷ್ಪಾರ್ಚನೆ ಮಾಡಿದರು. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದ 108 ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆ ಇದಾಗಿದೆ.
ಸದಾಶಿವನಗರದ ರಮಣ ಮಹರ್ಷಿ ಪಾರ್ಕ್ ಏರ್ಪಡಿಸಿದ್ದ ಕೆಂಪೇಗೌಡ ಉತ್ಸವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪಾಲ್ಗೊಂಡು ಗೌರವ ಸಲ್ಲಿಸಿದರು. ಈ ವೇಳೆ ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ, ಆದಿ ಚುಂಚನಗಿರಿ ಶಾಖಾಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ಶಾಸಕರಾದ ಅಶ್ವಥ್ ನಾರಾಯಣ್, ಮುನಿರಾಜು, ಪತ್ರಕರ್ತ ಸುದರ್ಶನ್ ಚನ್ನಂಗಿಹಳ್ಳಿ, ರಾಜ್ಯ ಒಕ್ಕಲಿಗರ ಮಹಾಸಭಾ ಅಧ್ಯಕ್ಷ ಎ.ಎಚ್ ಅನಂದ್ ಮತ್ತಿತರರು ಭಾಗವಹಿಸಿದ್ದರು.
ಇದನ್ನೂ ಓದಿ:ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು, ಸಿ.ಟಿ ರವಿ, ಈಶ್ವರಪ್ಪ ಕುರಿ ಮೇಯಿಸಿಕೊಂಡು ಇರಬೇಕಿತ್ತು: ಸಿದ್ದರಾಮಯ್ಯ
ಬೆಂಗಳೂರಿನ ಬಂಡಿ ಮಾಂಕಾಳಮ್ಮ ದೇವಾಲಯ ಸಮೀಪ ಕೆಂಪೇಗೌಡರ ಪ್ರತಿಮೆಗೆ ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ಗವೀಪುರಂ ಗುಟ್ಟಹಳ್ಳಿ ಯಲ್ಲಿ ಆಯೋಜಿಸಿದ್ದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಶಾಸಕ ರವಿ ಸುಬ್ರಹ್ಮಣ್ಯ, ಪರಿಷತ್ ಸದಸ್ಯ ಶರವಣ ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.
ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಛೇರಿಯ ಮುಂಭಾಗದ ಉದ್ಯಾನದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಆಡಳಿತಗಾರ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಮಾಲಾರ್ಪಣೆ ಮಾಡಿ ಪುಷ್ಪನಮನ ಅರ್ಪಿಸಿದರು. ಈ ವೇಳೆ ವಿಶೇಷ ಆಯುಕ್ತ ಡಾ. ಹರೀಶ್ ಕುಮಾರ್, ಉಪ ಆಯುಕ್ತ ಮಂಜುನಾಥ ಸ್ವಾಮಿ ಸೇರಿದಂತೆ, ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 6 =
Remember me
