ಬೆಂಗಳೂರು:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣವಾಗಿರುವ ನಾಡಪ್ರಭು ಕೆಂಪೇಗೌಡರ ಬೃಹತ್​ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು(ಶುಕ್ರವಾರ) ಅನಾವರಣ ಮಾಡಿದರು. ಈ ವೇಳೆ ತೆಗೆದ ಫೋಟೋವೊಂದನ್ನು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿರುವ ಕಾಂಗ್ರೆಸ್​, ರಾಜ್ಯ ಬಿಜೆಪಿ ನಾಯಕರನ್ನು ಟೀಕಿಸಿದೆ.
‘ಸ್ವಾಮೀಜಿಗಳಿಗೆ ಅವರದ್ದೇ ಆದ ಗೌರವವಿರುತ್ತದೆ. ಘನತೆ ಇರುತ್ತದೆ. ಅವರ ಹೆಗಲ ಮೇಲೆ ಕೈ ಹಾಕುವಷ್ಟು ಆದಿಚುಂಚನಗಿರಿ ಶ್ರೀಗಳು ಆರ್​. ಅಶೋಕ್​ ಅವರಿಗೆ ಸದರ ಎನಿಸಿದ್ದಾರೆಯೇ? ಇದೇ ರೀತಿ ಮೋದಿ ಹೆಗಲಿಗೆ ಕೈ ಹಾಕುವ ಧೈರ್ಯವಿದೆಯೇ? ಧರ್ಮ, ಸಂಸ್ಕೃತಿಯ ಬಗ್ಗೆ ಮಾತಾಡುವ ಕರ್ನಾಟಕ ಬಿಜೆಪಿ ನಾಯಕರಿಗೆ ಕನಿಷ್ಠ ಸಂಸ್ಕಾರದ ಜ್ಞಾನವಿಲ್ಲ’ ಎಂದು ಕಾಂಗ್ರೆಸ್​ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.
ಕೆಂಪೇಗೌಡರ ಪ್ರತಿಮೆ ಬಳಿ ಪ್ರಧಾನಿ ನರೇಂದ್ರ ಮೋದಿ, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ಯಪಾಲ ಥಾವರ್​ ಚಂದ್​ ಗೆಲ್ಹೋಟ್​, ಸಿಎಂ ಬಸವರಾಜ ಬೊಮ್ಮಾಯಿ, ಬಿ.ಎಸ್.​ ಯಡಿಯೂರಪ್ಪ ಸೇರಿದಂತೆ ಹಲವರು ಗ್ರೂಪ್​ ಫೋಟೋ ತೆಗೆಸಿಕೊಂಡಿದ್ದಾರೆ. ಈ ವೇಳೆ ನಿರ್ಮಲಾನಂದನಾಥ ಶ್ರೀಗಳ ಹೆಗಲ ಮೇಲೆ ಸಚಿವ ಆರ್​.ಅಶೋಕ್​ ಕೈ ಹಾಕಿದ್ದಾರೆ. ಅಶೋಕ್​ರ ಈ ವರ್ತನೆಯನ್ನ ಕಾಂಗ್ರೆಸ್​ ಟೀಕಿಸಿದೆ.
ಸ್ವಾಮಿಜಿಗಳಿಗೆ ಅವರದ್ದೇ ಆದ ಗೌರವವಿರುತ್ತದೆ. ಘನತೆ ಇರುತ್ತದೆ.
ಹೆಗಲ ಮೇಲೆ ಕೈ ಹಾಕುವಷ್ಟು ಆದಿಚುಂಚನಗಿರಿ ಶ್ರೀಗಳು@RAshokaBJPಅವರಿಗೆ ಸದರ ಎನಿಸಿದ್ದಾರೆಯೇ? ಇದೇ ರೀತಿ ಮೋದಿ ಹೆಗಲಿಗೆ ಕೈ ಹಾಕುವ ಧೈರ್ಯವಿದೆಯೇ?
ಧರ್ಮ, ಸಂಸ್ಕೃತಿಯ ಬಗ್ಗೆ ಮಾತಾಡುವ@BJP4Karnatakaನಾಯಕರಿಗೆ ಕನಿಷ್ಠ ಸಂಸ್ಕಾರದ ಜ್ಞಾನವಿಲ್ಲ.pic.twitter.com/28MHEiVjLF
— Karnataka Congress (@INCKarnataka)November 11, 2022

ನಾಪತ್ತೆಯಾಗಿದ್ದ ದಂತ ವೈದ್ಯ ಡಾ. ಕೃಷ್ಣಮೂರ್ತಿ ಕುಂದಾಪುರದಲ್ಲಿ ಶವವಾಗಿ ಪತ್ತೆ!

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಜೆಡಿಎಸ್​: ಸಮಸ್ತ ಕನ್ನಡಿಗರು-ನಾಡಪ್ರಭು ಕೆಂಪೇಗೌಡರಿಗೂ ಅವಮಾನಿಸಿದ ಬಿಜೆಪಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + seven =
Remember me
