ಬಳ್ಳಾರಿ:ಭೀಕರವಾದ ರಸ್ತೆ ಅಪಘಾತದಲ್ಲಿ ಅಂತರಾಷ್ಟ್ರೀಯ ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಮೃತಪಟ್ಟಿದ್ದಾರೆ.
ಕಾರು ಪಲ್ಟಿಯಾದ ಪರಿಣಾಮ ನಾಡೋಜ ಬೆಳಗಲ್ಲು ವೀರಣ್ಣ(91) ಮೃತರು. ಈ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಬಳಿ ಇಂದು(ಭಾನುವಾರ) ಸಂಭವಿಸಿದೆ.
ಇಂದು ಬೆಳಗ್ಗೆ ಬಳ್ಳಾರಿಯಿಂದ ಚಿಕ್ಕಮಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ. ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಬೆಳಗಲ್ಲು ವೀರಣ್ಣ ಅವರು ಪುತ್ರ ಹನುಮಂತಪ್ಪ ಅವರಿಗೂ ಗಾಯಗಳಾಗಿದ್ದು, ಅವರನ್ನ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಅಂತ ತಿಳಿದು ಬಂದಿದೆ. ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಇದನ್ನೂ ಓದಿ:ಎಸ್​ಎಸ್​ಎಲ್​ಸಿ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ!ರಂಗಕಲಾವಿದ ಬೆಳಗಲ್ಲು ವೀರಣ್ಣ ಅವರು ಬಳ್ಳಾರಿ ಮೂಲದವರಾಗಿದ್ದಾರೆ. ನಾಡೋಜ ಬೆಳಗಲ್ಲು ವೀರಣ್ಣ ಅವರು ಅಮೆರಿಕಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ತೊಗಲುಗೊಂಬೆ ಪ್ರದರ್ಶನ ನೀಡಿದ್ದಾರೆ. ಮೂಲತಃ ತೊಗಲು ಗೊಂಬೆಯಾಟದ ಕಲಾವಿದರಾದ ಬೆಳಗಲ್ಲು ವೀರಣ್ಣ ಅವರು ತೊಗಲು ಗೊಂಬೆಯಾಟದ ಹಿರಿಮೆಯನ್ನು ಸಪ್ತ ಸಾಗರದ ಆಚೆ ತಲುಪಿಸಿದ ಅಪರೂಪದ ಕಲಾವಿದರು. ಶ್ರೀರಾಮಾಂಜನೇಯ ತೊಗಲು ಗೊಂಬೆ ಕಲಾ ಮೇಳವನ್ನು ಕಟ್ಟಿ ಊರೂರು, ರಾಜ್ಯದಿಂದ ರಾಜ್ಯ, ದೇಶದಿಂದ ವಿದೇಶಕ್ಕೆ ಸುತ್ತಿದವರು. ಅವರ ನಿಧನದಿಂದ ರಾಜ್ಯದ ಕಲಾಲೋಕ ಬಡವಾಗಿದೆ. ವೀರಣ್ಣನವರು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಜಿಲ್ಲೆಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಸೊಳ್ಳೆ ಬತ್ತಿಯಿಂದ ಹೊತ್ತಿಕೊಂಡ ಬೆಂಕಿ; ನಿದ್ದೆಯಲ್ಲಿದ್ದ ಆರು ಮಂದಿ ಮೃತ್ಯು


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
