ಬೆಂಗಳೂರು:ಆರ್​​ಎಸ್​​ಎಸ್​ ಆಯೋಜಿಸಿದ್ದ ಶ್ರೀ ಗುರುಪೂಜಾ ಉತ್ಸವ ಕಾರ್ಯಕ್ರಮದಲ್ಲಿ ಸಿನಿಮಾ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಲಾಗಿತ್ತು. ಇದಕ್ಕೆ ಅವರು ಇದೀಗ ಪ್ರತಿಕ್ರಿಯೆ ನೀಡಿದ್ದು, ನಾನು ಆರ್​​ಎಸ್​​ಎಸ್​​ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂದು ಹೇಳುವ ಮುಖೇನ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ:ಘಾಟಿ ಹೆದ್ದಾರಿಯಲ್ಲಿ ನೆಟ್‌ವರ್ಕ್ ಸಮಸ್ಯೆ
ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಜುಲೈ 16 ರಂದು ಆಯೋಜಿಸಿದ್ದ ಶ್ರೀ ಗುರುಪೂಜಾ ಉತ್ಸವ ಕಾರ್ಯಕ್ರಮಕ್ಕೆ ನಾಗತಿಹಳ್ಳಿ ಚಂದ್ರಶೇಖರ್ ಅವರ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವಿರೋಧಗಳು ವ್ಯಕ್ತವಾಗಿತ್ತು.
ಭಾರಿ ವಿರೋಧಗಳ ಬೆನ್ನಲ್ಲೇ ಇದೀಗ ನಿರ್ದೇಶಕ ಚಂದ್ರಶೇಖರ್​ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. “ಈ ಸಮಾರಂಭದಲ್ಲಿ ನಾನು ಭಾಗವಹಿಸುತ್ತಿಲ್ಲ. ಅದನ್ನು ನಾನು ಸ್ಪಷ್ಟಪಡಿಸಿಯೂ ಆಮಂತ್ರಣದಲ್ಲಿ ನನ್ನ ಹೆಸರು ಅಚ್ಚಾಗಿದೆ. ಅದು ‘ಆಕಸ್ಮಿಕ’ ಎಂದು ಅವರು ಕ್ಷಮೆಯಾಚಿಸಿದ್ದಾರೆ. ಅಲ್ಲಿಗೆ ವಿಷಯ ಮುಕ್ತಾಯಗೊಂಡಿದೆ. ಆ ದಿನಾಂಕದಂದು ನಾನು ದೂರದ ದೇಶದಲ್ಲಿ ಚಿತ್ರೀಕರಣದಲ್ಲಿರುವುದು ನನ್ನನ್ನು ಬಲ್ಲವರಿಗೆಲ್ಲ ತಿಳಿದಿದೆ” ಎಂದು ಹೇಳಿದರು.
ಇದನ್ನೂ ಓದಿ:“ಬೆಹತರ್‌ ಭಾರತ್‌ ಬುನಿಯಾದಿ” ರಾಷ್ಟ್ರೀಯ ಕಾರ್ಯಕ್ರಮ ಉದ್ಘಾಟಿಸುವಂತೆ ಸಿಎಂಗೆ ಆಹ್ವಾನ ನೀಡಿದ ಯುವ ಕಾಂಗ್ರೆಸ್‌ ನಿಯೋಗ!
“ನನ್ನನ್ನು ಅತ್ಯಂತ ಹತ್ತಿರದಿಂದ ಬಲ್ಲ, ನನ್ನನ್ನು ನಂಬುವ, ನನ್ನನ್ನು ಪ್ರೀತಿಸುವ, ನನ್ನನ್ನು ಬೆಳೆಸಿರುವ, ನನ್ನೊಂದಿಗೆ ಹಳ್ಳಿಯ ಕೆಲಸದಲ್ಲಿ ಕೈಜೋಡಿಸಿರುವ ಅಕ್ಕರೆಯ ಎಲ್ಲ ಮನಸ್ಸುಗಳಿಗೆ ಹೇಳುವ ಒಂದು ಮಾತು, ನಾನು ಏನಾಗಿದ್ದೀನೋ ಅದೇ ಆಗಿ ಇರುತ್ತೇನೆ. ನಾನು ಏನು ಮಾಡುತ್ತಿದ್ದೀನೋ ಅದು ಸರಿ ಇದೆ. ಅದನ್ನೇ ಮುಂದುವರೆಸುತ್ತೇನೆ” ಎಂದು ಹೇಳಿದರು.
“ತಪ್ಪು ತಿಳಿಯಲು, ತಪ್ಪು ಹರಡಲು ತುದಿಗಾಲಲ್ಲಿ ನಿಂತವರನ್ನು, ನಿತ್ಯ ಹೊಸ, ಹುಸಿ ರೋಮಾಂಚನ ಬಯಸುವ ಮಹನೀಯರನ್ನು ಮನ್ನಿಸಿ ಮುಂದೆ ಹೋಗೋಣ. ಇಲ್ಲಿ ನಾವೆಲ್ಲ ಮಾಡಲೇಬೇಕಾದ ಜನಪರ ಕೆಲಸಗಳು ಬಹಳಷ್ಟಿವೆ. ಮಾಡೋಣ. ಇನ್ನು ಮಾತು ಸಾಕು” ಎಂದು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಬರೆದು ಪೋಸ್ಟ್​ ಮಾಡಿದ್ದಾರೆ,(ಏಜೆನ್ಸೀಸ್).

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
