ಬೆಂಗಳೂರು:ಇತ್ತೀಚಿಗೆ ಬಿಡುಗಡೆಯಾದ ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಖ್ಯಾತ ಹೃದ್ರೋಗ ತಜ್ಞ ಡಾ. ಸಿ.ಎನ್. ಮಂಜುನಾಥ್​ಗೆ ಟಿಕೆಟ್​ ನೀಡಲಾಗಿದ್ದು, ಅವರು ಸ್ಥಳೀಯ ನಾಯಕರು ಹಾಗೂ ಜನರ ಭೇಟಿಯಲ್ಲಿ ನಿರತರಾಗಿದ್ದಾರೆ.
ಇತ್ತ ಡಾ. ಸಿ.ಎನ್. ಮಂಜುನಾಥ್ ರಾಜಕಾರಣ ಪ್ರವೇಶಿಸಿದ್ದು ದುರದೃಷ್ಟಕರ. ಕಾರಣ ಏನೇ ಇರಲಿ ಎಂದು ಚಿತ್ರ ನಿರ್ದೇಶಕ  ನಾಗತಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು ಮಂಜುನಾಥ್ ಇದು ನಿಮಗೆ ಬೇಕಿತ್ತೆ ಎಂದು ಪ್ರಶ್ನಿಸಿದ್ದಾರೆ.
ನಮ್ಮ ಪ್ರೀತಿಯ ವೈದ್ಯಡಾ. ಸಿ.ಎನ್. ಮಂಜುನಾಥ್ ರಾಜಕಾರಣ ಪ್ರವೇಶಿಸಿದ್ದು ದುರದೃಷ್ಟಕರ. ಕಾರಣ ಏನೇ ಇರಲಿ. ಇಲ್ಲಿ ಪಡೆದುದನ್ನು ಅಲ್ಲಿ ಕಳೆದುಕೊಳ್ಳಬಹುದೇನೋ. ಜನರ ಸೇವೆ ಮಾಡಲು ರಾಜಕಾರಣ ಒಂದೇ ದಾರಿ ಅಂತ ಯಾವ ಮೂರ್ಖ ಹೇಳಿದ?ಸಮಾಜವನ್ನು ಕಟ್ಟಲು ಸಾವಿರ ದಾರಿಗಳಿವೆ. ಮಂಜುನಾಥ್ ಇದು ನಿಮಗೆ ಬೇಕಿತ್ತೆ?
ಇದನ್ನೂ ಓದಿ:ಆರ್​ಸಿಬಿ ಪರ ಹೊಸ ದಾಖಲೆ ಬರೆದ ಎಲ್ಲಿಸ್​ ಪೆರ್ರಿ
ನಮ್ಮ ಪ್ರೀತಿಯ ವೈದ್ಯ ಡಾ. ಸಿ.ಎನ್. ಮಂಜುನಾಥ್ ರಾಜಕಾರಣ ಪ್ರವೇಶಿಸಿದ್ದು ದುರದೃಷ್ಟಕರ. ಕಾರಣ ಏನೇ ಇರಲಿ. ಇಲ್ಲಿ ಪಡೆದುದನ್ನು ಅಲ್ಲಿ ಕಳೆದುಕೊಳ್ಳಬಹುದೇನೋ. ಜನರ ಸೇವೆ ಮಾಡಲು ರಾಜಕಾರಣ ಒಂದೇ ದಾರಿ ಅಂತ ಯಾವ ಮೂರ್ಖ ಹೇಳಿದ?ಸಮಾಜವನ್ನು ಕಟ್ಟಲು ಸಾವಿರ ದಾರಿಗಳಿವೆ. ಮಂಜುನಾಥ್ ಇದು ನಿಮಗೆ ಬೇಕಿತ್ತೆ ಎಂದು ಬರೆದುಕೊಂಡಿದ್ದಾರೆ.
ನಾಗತಿಹಳ್ಳಿ ಚಂದ್ರಶೇಖರ್ ಅವರ ಪೋಸ್ಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್​ ಆಗುತ್ತಿದ್ದು, ಪರ –ವಿರೋಧದ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ. ಸಿ.ಎನ್. ಮಂಜುನಾಥ್ ಅವರು ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ರಾಜ್ಯದ ಏಕೈಕ ಕಾಂಗ್ರೆಸ್ ಸಂಸದರಾಗಿರುವ ಡಿ.ಕೆ. ಸುರೇಶ್ ಪ್ರತಿನಿಧಿಸುವ ಕ್ಷೇತ್ರವು ಇದಾಗಿದ್ದು, ಈ ಬಾರಿ ಹೆಚ್ಚು ಪೈಪೋಟಿ ನಿರೀಕ್ಷಿಸಲಾಗುತ್ತಿದೆ.

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen + seven =
Remember me
