ಬಾಗಲಕೋಟೆ:ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇದೀಗ ಮತ್ತೊಮ್ಮೆ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸಿದ್ದರಾಮಯ್ಯನವರ ಬಗ್ಗೆ ಬಿಜೆಪಿಗೆ ಭಯವಿಲ್ಲ. ಅವರ ಬಗ್ಗೆ ನಮಗೆ ಬಹಳ ಖುಷಿಯಿದೆ. ಬಿಜೆಪಿಗೆ ಹೆಚ್ಚಿನ ಮತ ಬರುವುದೇ ಸಿದ್ದರಾಮಯ್ಯ ಮಾತಿನಿಂದ ಎಂದು ಹೇಳಿದರು.
ರಾಹುಲ್ ಗಾಂಧಿ, ಸಿದ್ದರಾಮಯ್ಯ ಇರುವ ತನಕ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿರುತ್ತದೆ. ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅತಂತ್ರ ಸ್ಥಿತಿಗೆ ಬಂದಿದ್ದಾರೆ. ಕಾಂಗ್ರೆಸ್​​ನಲ್ಲಿ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.
ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್​ ಖಂಡಿತ ಟಿಕೆಟ್ ನೀಡುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಅವರನ್ನು ಗೆಲ್ಲಲು ಬಿಡುವುದಿಲ್ಲ. ಸಿದ್ದರಾಮಯ್ಯ, ಖರ್ಗೆ ಹಾಗೂ ಪರಮೇಶ್ವರ್ ಅವರಿಗೆ ದ್ರೋಹ ಮಾಡಿದ್ದು ಖರ್ಗೆ ಮನಸ್ಸಿನಲ್ಲಿ ಇನ್ನೂ ಇದೆ. ಹೀಗಾಗಿ ಈ ಭಾರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸುವುದು ಖಂಡಿತ.
ಸಿದ್ದರಾಮಯ್ಯ ರಾಜ್ಯದ ರಾಜಕೀಯದ ಖಳನಾಯಕ. ಇವರು ಯಾರನ್ನೂ ಬದುಕಲು ಬಿಡುವುದಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ಸೇರಲು ದೇವೇಗೌಡರನ್ನು ತುಳಿದು, ಜೆಡಿಎಸ್​ನಿಂದ ಹೊರಬಂದರು. ಇಂದಿರಾಗಾಂಧಿಯನ್ನು ಕೆಟ್ಟ ಶಬ್ದಗಳಿಂದ ಬೈದವರು, ಸೋನಿಯಾಗಾಂಧಿ ಕಾಲು ಹಿಡಿದು, ಭಿಕ್ಷೆ ಬೇಡಿ ಸಿಎಂ‌ ಆದರು ಎಂದು ಟೀಕಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
