ಧಾರವಾಡ:ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಮಾತಿನ ಜಗಳ ಮತ್ತೆ ಆರಂಭವಾದಂತಿದೆ. ಇದೀಗ ಸಿದ್ದರಾಮಯ್ಯ ಅವರನ್ನು ಸಿದ್ದರಾವಣ, ನೀಚಣ್ಣ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದ್ದಾರೆ.
ನವಲಗುಂದ ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಭಾಷಣ ಮಾಡುತ್ತಾ, ಹಿಂದಿನಿಂದಲೂ ಭಯೋತ್ಪಾದಕರ ಪರವಾಗಿ ಕಾಂಗ್ರೆಸ್ ಪಕ್ಷ ನಿಂತಿದೆ. ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಎಲ್ಲರೂ ಭಯೋತ್ಪಾದಕರ ಪರ ಇದ್ದಾರೆ ಎಂದು ಟೀಕಿಸಿದರು.
ಶೃಂಗೇರಿಯಲ್ಲಿ ಗೋ ಹಂತಕರ ಮೇಲೆ ಪೊಲೀಸರು ಗುಂಡಿಟ್ಟಿದ್ದರು. ಆಗ ಆತನ ಮನೆಗೆ ಹೋಗಿ ಸಿದ್ದರಾಮಯ್ಯ ಕಣ್ಣೀರು ಹಾಕಿದ್ದರು. ಸಿಎಂ ಆದಾಗ ಗೋ ಹಂತಕರ ಪರವಾಗಿ ಸಿದ್ದರಾಮಯ್ಯ ಇದ್ದರು. 24 ಹಿಂದೂ ಕಾರ್ಯಕರ್ತರ ಹತ್ಯೆಯಾದಾಗಲೂ ಕಣ್ಣೀರು ಹಾಕದ ಸಿದ್ದರಾಮಯ್ಯ ಈ ರಾಜ್ಯದ ಏಕೈಕ ರಾವಣ ಎಂದು ವಾಗ್ದಾಳಿ ನಡೆಸಿದ್ದಾರೆ.
ಹಿಂದೂ ಕಾರ್ಯಕರ್ತರ ಹತ್ಯೆಯ ಮೇಲಿನ ಕೇಸ್ ಹಿಂತೆಗೆದುಕೊಂಡಿರುವುದು ರಾಜ್ಯದಲ್ಲಿ ಪಿಎಫ್​ಐ ಬೆಳೆಯಲು ನೆರವಾಯಿತು. ನಮ್ಮ ರಾಜ್ಯದಲ್ಲಿ ಧರ್ಮ ವಿಭಜನೆ ಮಾಡಿದ ಶ್ರೇಯಸ್ಸು ನೀಚಣ್ಣ ಸಿದ್ದರಾಮಯ್ಯ ಅವರಿಗೆ ಸಲ್ಲಬೇಕು ಎಂದು ನಳಿನ್ ಕುಮಾರ್ ಕಟೀಲ್ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + five =
Remember me
