ಬಳ್ಳಾರಿ:ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ್ದಾರೆ. ‘ನನ್ನ ಅವಧಿ ಮುಕ್ತಾಯವಾಗಿದೆ. ಹೊಸದಾಗಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಯುತ್ತದೆ. ನೈತಿಕವಾಗಿ ಜವಾಬ್ದಾರಿ ಹೊತ್ತು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ರಾಜೀನಾಮೆ ಪತ್ರ ನೀಡಿದ್ದೇನೆ. ನಿರ್ಧಾರದ ಬಗ್ಗೆ ಮೌಖಿಕವಾಗಿಯೂ ತಿಳಿಸಿದ್ದೇನೆ’ ಎಂದು ತಿಳಿಸಿದರು.
‘ಪಕ್ಷದಲ್ಲಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಯಾವುದೇ ಕೂಗಿಲ್ಲ. ಆದರೇ ನನ್ನ ಎರಡು ಟರ್ಮ್​ನ ಅವಧಿ ಮುಗಿದಿದೆ. ಹೀಗಾಗಿ ಸಹಜವಾಗಿಯೇ ರಾಜ್ಯಾಧ್ಯಕ್ಷರ ಬದಲಾವಣೆ ಆಗಬೇಕು. ನಮ್ಮ ಪಕ್ಷದಲ್ಲಿ ಅಧ್ಯಕ್ಷರ ಅವಧಿ ಎರಡು ವರ್ಷ. ಆದರೆ ನಾನು ನಾಲ್ಕು ವರ್ಷ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಬದಲಾವಣೆ ಪ್ರಕ್ರಿಯೆ ನಡೆಯುತ್ತಿದೆ’ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.
ಬಿಜೆಪಿ ಪಕ್ಷದಲ್ಲಿ ಅಧ್ಯಕ್ಷರ ಬದಲಾವಣೆ ಕೂಗಿಲ್ಲ. ವಿ.ಸೋಮಣ್ಣ ಅವರು ಅಧ್ಯಕ್ಷ ಸ್ಥಾನ ಕೇಳಿದರೆ ಯಾವುದೇ ತಪ್ಪಿಲ್ಲ. ಅವರು ನಮ್ಮ ಪಕ್ಷದ ಹಿರಿಯ ನಾಯಕ. ರಾಷ್ಟ್ರೀಯ ಅಧ್ಯಕ್ಷರಿಗೆ ಏನು ಹೇಳಬೇಕೊ ಅದನ್ನು ಈಗಾಗಲೇ ಹೇಳಿ ಕಳುಹಿಸಿದ್ದೇನೆ ಎಂದರು.
ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದಂತೆ ಬಿಜೆಪಿ ಚಟುವಟಿಕೆ ಗರಿಗೆದರಿದೆ. ಶೀಘ್ರದಲ್ಲೇ ನೂತನ ರಾಜ್ಯಾಧ್ಯಕ್ಷ ನೇಮಕ ಸಾಧ್ಯತೆ ಇದ್ದು, ಪ್ರಮುಖ ನಾಯಕರು ರೇಸ್​ನಲ್ಲಿ ಇದ್ದಾರೆ. ವಿ.ಸೋಮಣ್ಣ, ಅರವಿಂದ್ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್, ಆರ್.ಅಶೋಕ್, ಅಶ್ವತ್ಥ ನಾರಾಯಣ, ಸಿಟಿ ರವಿ, ವಿ. ಸುನಿಲ್ ಕುಮಾರ್, ಕೆ.ಎಸ್. ಈಶ್ವರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
