ಕಲಬುರಗಿ:ತಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆ ಮತ್ತು ತಮಗೆ ಅಪರಿಚಿತರಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂಬುದಾಗಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ಕೊಟ್ಟಿದ್ದು ನಿಮಗೆ ಗೊತ್ತು. ಅದಕ್ಕೆ ಕಾರಣ ಏನು ಎಂಬುದನ್ನು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಬುಧವಾರ ಬಹಿರಂಗಪಡಿಸಿದ್ದಾರೆ.
‘‘ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇವಲ ಕಾರಿನಲ್ಲಿ ತಿರುಗಾಡಲು ಮುಜುಗರವಾಗುವುದರಿಂದ ಎಸ್ಕಾರ್ಟ್ ವಾಹನ ಮತ್ತು ಭದ್ರತೆ ಹೆಚ್ಚಿಸಿಕೊಳ್ಳಲು ಜೀವ ಬೆದರಿಕೆ ಹಾಕಿದ್ದಾರೆ ಎಂಬ ತಂತ್ರ ಹೆಣೆದಿದ್ದಾರೆ’’ ಎಂದು ಕಟೀಲ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
‘‘ಕೇಂದ್ರ ಸಚಿವರಾಗಿದ್ದಾಗ ಮತ್ತು ವಿರೋಧ ಪಕ್ಷದ ನಾಯಕರಾಗಿದ್ದ ವೇಳೆಯಲ್ಲಿ ಖರ್ಗೆ ಅವರಿಗೆ ಬೆಂಗಾವಲು ವಾಹನ ಮತ್ತು ಪೊಲೀಸ್ ಬಂದೋಬಸ್ತ್ ಇರುತ್ತಿತ್ತು. ಚುನಾವಣೆಯಲ್ಲಿ ಸೋತ ಬಳಿಕ ಅವರು ಅದನ್ನು ಕಳೆದುಕೊಂಡಿದ್ದಾರೆ’’ ಎಂದು ವಿವರಿಸಿದರು.
‘‘ಈಗ ರಾಜ್ಯಸಭಾ ಸದಸ್ಯರಾಗುತ್ತಿರುವುದರಿಂದ ಅವರಿಗೆ ಕೇವಲ ಕಾರ್ ಮಾತ್ರ ಇರುತ್ತದೆ. ಹೀಗಾಗಿ ಜೀವಭಯ ಇದೆ ಅಂತ ಪೊಲೀಸರಿಗೆ ದೂರು ನೀಡಿದ್ದಾರೆ. ಭದ್ರತೆ ಹೆಚ್ಚಿಸಿಕೊಳ್ಳಲು ಇಲ್ಲದ ಸುಳ್ಳು ದೂರು ನೀಡಿರುವಂತಿದೆ’’ ಎಂದು ಲೇವಡಿ ಮಾಡಿದರು.
ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಇಬ್ಬರಿಗೂ ಒಂದೇ ದಿನ ಜೀವ ಬೆದರಿಕೆ ಕರೆ

ಮೈ ಭೀ ದುಃಖಿ ಹ್ಞೂ ಅಂತಾರೆ ಪ್ರಧಾನಿ: ಮಲ್ಲಿಕಾರ್ಜುನ ಖರ್ಗೆ ಟೀಕೆ

ಅಂಬೇಡ್ಕರ್ ರಾಜೀನಾಮೆ ನೀಡಿದ್ದರ ಹಿನ್ನೆಲೆ ಏನು?: ಆ ಬಗ್ಗೆ ಕಾಂಗ್ರೆಸ್​ ನಾಯಕ ಮಲ್ಲಿಕಾರ್ಜುನ ಖರ್ಗೆ ಏನು ಹೇಳ್ತಾರೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 10 =
Remember me
