ಬೆಂಗಳೂರು:ಕಳೆದ ಜನವರಿ ರಾಜಧಾನಿ ಬೆಂಗಳೂರಿನಲ್ಲಿ 108 ವಾಡ್೯ಗಳಲ್ಲಿ ‘ನಮ್ಮ ಕ್ಲಿನಿಕ್’ ಆರಂಭವಾಗಿದ್ದವು. ಇದೀಗ ಅಗತ್ಯ ಸಿದ್ದತೆ ಮಾಡಿಕೊಳ್ಳುವ ಮೂಲಕ 225 ವಾಡ್೯ನಲ್ಲಿ ‘ನಮ್ಮ ಕ್ಲಿನಿಕ್’ ಆರಂಭವಾಗಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ತ್ರಿಲೋಕಚಂದ್ರ ಅವರು ಮಾಹಿತಿ ನೀಡಿದ್ದಾರೆ.
ವೈದ್ಯರ ಕೊರತೆಗೂ ಬಿಬಿಎಂಪಿ ಪರಿಹಾರ ಹುಡುಕಿದ್ದು, ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳ ನೇಮಕ ಮಾಡಿಕೊಳ್ಳಲಾಗುತ್ತಿದೆ. ಹಾಗೆಯೇ 225 ‘ನಮ್ಮ ಕ್ಲಿನಿಕ್’ನಲ್ಲಿ 221 ನಸ್೯ಗಳು, 222 ವೈದ್ಯರು, 223 ಲ್ಯಾಬ್ ಟೆಕ್ನಿಷಿಯನ್, 232 ಮಂದಿ ಗ್ರೂಪ್ ಡಿ ಸಿಬ್ಬಂದಿ ನಿಯೋಜಿಸಲಾಗುತ್ತದೆ. ‘ನಮ್ಮ‌ ಕ್ಲಿನಿಕ್’ ಆರಂಭವಾದಗಿನಿಂದಲೂ 2.29 ಲಕ್ಷ ಮಂದಿ ಭೇಟಿ ನೀಡಿದ್ದು, 87,055 ಮಂದಿ ವಿವಿಧ ರೋಗ ಪರೀಕ್ಷೆಗಳಿಗೆ ಒಳಗಾಗಿದ್ದಾರೆ.
ಕ್ಲಿನಿಕ್‌ ಸಮಯ‘ನಮ್ಮ ಕ್ಲಿನಿಕ್’​​​​​​ಗಳು ಬೆಳಗ್ಗೆ 9 ರಿಂದ ಸಂಜೆ 4.30 ರವರೆಗೆ ಸೋಮವಾರದಿಂದ ಶನಿವಾರದವರೆಗೆ ಕಾರ್ಯನಿರ್ವಹಿಸಲಿವೆ.
ಆಧಾರ್-ಪ್ಯಾನ್ ಲಿಂಕ್ ಮಾಡಿಸಲು ಇಂದು ಕೊನೇ ದಿನ! ಮತ್ತೆ ಅವಧಿ ವಿಸ್ತರಣೆ ಬಹುತೇಕ ಡೌಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 12 =
Remember me
