ಬೆಂಗಳೂರು: ನಗರ ಪ್ರದೇಶಗಳ ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಆರಂಭಿಸಿರುವ ‘ನಮ್ಮ ಕ್ಲಿನಿಕ್’ನ ಸೇವೆ ಸಮರ್ಪಕವಾಗಿ ದೊರೆಯುವಂತೆ ಮಾಡಲು ಶೇ.25 ಕ್ಲಿನಿಕ್‌ಗಳ ಸಮಯವನ್ನು ಬದಲಿಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ.
ಬಡ ರೋಗಿಗಳಿಗೆ ಅನುಕೂಲಕ್ಕಾಗಿ ಆರಂಭವಾದ ‘ನಮ್ಮ ಕ್ಲಿನಿಕ್’ಗಳು ನಿತ್ಯ ಬೆಳಗ್ಗೆ 9ರಿಂದ ಮಧ್ಯಾಹ್ನ 12.30ಕ್ಕೆ ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4.30ರ ವರೆಗೆ ಮಾತ್ರ ಸೇವೆ ನೀಡುತ್ತಿವೆ. ಇದರ ಬದಲಿಗೆ ಮಧ್ಯಾಹ್ನ 12ರಿಂದ ರಾತ್ರಿ 8ರ ವರೆಗೆ ಕ್ಲಿನಿಕ್ ತೆರೆದರೆ ಬಡವರಿಗೆ, ಕೆಲಸಕ್ಕೆ ಹೋಗುವ ಕೂಲಿ ಕಾರ್ಮಿಕರಿಗೆ ಸಂಜೆ ನಂತರ ಕ್ಲಿನಿಕ್‌ನ ಸೇವೆ ಪಡೆಯಲು ಅನುಕೂಲವಾಗಲಿದೆ. ಈ ಕಾರಣಕ್ಕೆ ಕ್ಲಿನಿಕ್‌ನ ಕಾರ್ಯನಿರ್ವಹಣೆಯ ಅವಧಿ ಬದಲಿಸಲು ಇಲಾಖೆ ಯೋಚಿಸಿದೆ.
ಕ್ಲಿನಿಕ್‌ಗಳಲ್ಲಿ ಎರಡು ಪಾಳಿಯಂತೆ ದಿನಪೂರ್ತಿ ಸೇವೆ ಒದಗಿಸಬಹುದಾಗಿದ್ದು, ಅದಕ್ಕೆ ಹೆಚ್ಚಿನ ವೈದ್ಯರು, ತಂತ್ರಜ್ಞರು ಹಾಗೂ ಸಿಬ್ಬಂದಿ ಬೇಕಾಗುತ್ತಾರೆ. ಆದರೆ ಈಗ ವೈದ್ಯರು ಸೇರಿ ಅಗತ್ಯ ಸಿಬ್ಬಂದಿ ಕೊರತೆ ಇರುವುದರಿಂದ ಎರಡು ಪಾಳಿ ಮಾಡುವ ಬದಲು, ಈಗಿರುವ ಸಮಯ ಬದಲಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಜನರ ಪ್ರತಿಕ್ರಿಯೆ ಆಧರಿಸಿ ಮುಂದಿನ ದಿನಗಳಲ್ಲಿ ಇತರೆ ಕ್ಲಿನಿಕ್‌ಗಳ ಸಮಯ ಬದಲಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ.
5 ಲಕ್ಷಕ್ಕೂ ಅಧಿಕ ಮಂದಿಗೆ ಸೇವೆ:ರಾಜ್ಯದಲ್ಲಿ 415 ನಮ್ಮ ಕ್ಲಿನಿಕ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಈವರೆಗೂ 96 ಸಾವಿರ ಮಹಿಳೆಯರು ಹಾಗೂ 4.21 ಲಕ್ಷ ಪುರುಷರು ಸೇರಿ 5 ಲಕ್ಷಕ್ಕೂ ಅಧಿಕ ಮಂದಿ ಸೇವೆ ಪಡೆದುಕೊಂಡಿದ್ದಾರೆ. ನಿತ್ಯ ಸರಾಸರಿ 35-40 ಜನರು ‘ನಮ್ಮ ಕ್ಲಿನಿಕ್’ಗಳಿಗೆ ಭೇಟಿ ನೀಡುತ್ತಿದ್ದಾರೆ. 2.88 ಲಕ್ಷ ಜನರು ರಕ್ತ ಪರೀಕ್ಷೆ ಸೇರಿ ವಿವಿಧ ರೋಗ ಪತ್ತೆ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 1 =
Remember me
