ಬೆಂಗಳೂರು:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಕರ್ನಾಟಕ ಸಂಭ್ರಮ -50’ರ ಅಂಗವಾಗಿ, ಅನ್ ಬಾಕ್ಸಿಂಗ್ ಬೆಂಗಳೂರು ಇದರ ಭಾಗವಾಗಿ ಆಯೋಜಿಸಿರುವ ನಮ್ಮ ಜಾತ್ರೆ ಜನಪದ ಸಂಭ್ರಮವನ್ನು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉದ್ಘಾಟಿಸಬೇಕಿತ್ತು. ಆದರೆ ಹಿರಿಯ ನಟಿ ಲೀಲಾವತಿ ನಿಧನದ ಕಾರಣ ನಮ್ಮ ಜಾತ್ರೆ ಕಾರ್ಯಕ್ರಮವನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ.
ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ,ಕರ್ನಾಟಕ ಸಂಭ್ರಮ -50ರ ಅಂಗವಾಗಿ, ಅನ್ ಬಾಕ್ಸಿಂಗ್ ಬೆಂಗಳೂರು ಇದರ ಭಾಗವಾಗಿ ಆಯೋಜಿಸಿರುವ ನಮ್ಮ ಜಾತ್ರೆ ಜನಪದ ಸಂಭ್ರಮ ವನ್ನು ರವಿವಾರಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ಹಿರಿಯ ಚಲನಚಿತ್ರ ಕಲಾವಿದೆ ಶ್ರೀಮತಿ ಲೀಲಾವತಿ ಅವರ ನಿಧನದಿಂದಾಗಿ ಅವರ ಗೌರವಾರ್ಥ ಈ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನಾಳೆ ಬೆಳಗ್ಗೆ 9:30ಕ್ಕೆ ಭವ್ಯವಾದ ಮೆರವಣಿಗೆಯ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಗುತ್ತದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈ ಮೆರವಣಿಗೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ ಕೆ .ಶಿವಕುಮಾರ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಉಪಸ್ಥಿತರಿರುತ್ತಾರೆ.
ನಂತರ ಬೆಳಿಗ್ಗೆ 11 ಗಂಟೆಗೆ ರವೀಂದ್ರ ಕಲಾಕ್ಷೇತ್ರ ದಲ್ಲಿ ಜಾನಪದ ಕಲಾ ಪ್ರದರ್ಶನ, ಆಹಾರ ಮೇಳ, ಗುಡಿ ಮತ್ತು ಕುಶಲ ಕಲೆಗಾರಿಕೆಗಳ ಮಾರಾಟ ಮಳಿಗೆ ಹಾಗೂ ಪ್ರದರ್ಶನವನ್ನು ಕೂಡ ಸಿಎಂ ಸಿದ್ಧರಾಮಯ್ಯನವರು ಉದ್ಘಾಟಿಸುವರು.
ಭಯೋತ್ಪಾದಕರ ಸಂಚಿನ ಪ್ರಕರಣದಲ್ಲಿ ಎನ್‌ಐಎ ಮಹತ್ವದ ಕ್ರಮ: ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × 4 =
Remember me
