ಬೆಂಗಳೂರು:ಭಾನುವಾರ (ಡಿಸೆಂಬರ್ 03) ದಂದು ಬೆಂಗಳೂರಿನ ಚಿನ್ನಸ್ಚಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯ ನಡುವೆ ನಡೆಯಲಿರುವ ಅಂತಿಮ ಟಿ-20 ಕದನಕ್ಕೆ ಸಂಬಂಧಿಸಿದಂತೆ ನಮ್ಮ ಮೆಟ್ರೋ ರೈಲುಗಳ ಸೇವೆಯನ್ನು ವಿಸ್ತರಿಸಿದೆ.
ನಗರದ ವಿವಿದೆಢೆಯಿಂದ ಪಂದ್ಯವನ್ನು ವೀಕ್ಷಿಸಲು ಸಾರ್ವಜನಿಕರು ಆಗಮಿಸಲಿದ್ದು, ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಬೈಯ್ಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ಸಿಲ್ಕ್ ಇನ್ಸ್ಟಿಟ್ಯೂಟ್ ಮೆಟ್ರೋ ಸಂಚಾರ ಸೇವೆಯಲ್ಲಿ ವಿಸ್ತರಣೆ ಮಾಡಲಾಗಿದೆ. ರಾತ್ರಿ ಪಂದ್ಯವನ್ನು ಮುಗಿಸಿಕೊಂಡು ಯಾವುದೇ ಭೀತಿಯಿಲ್ಲದೆ ಆರಾಮಾಗಿ ಕ್ರೀಡಾಭಿಮಾನಿಗಳು ಪ್ರಯಾಣಿಸಬಹುದಾಗಿದೆ.
ಇದನ್ನೂ ಓದಿ:ರೈಲು ಪ್ರಯಾಣಿಕರಿಗೆ ಗುಡ್​ ನ್ಯೂಸ್; ಬೆಂಗಳೂರು-ಧಾರವಾಡ ಮಾರ್ಗದ ವಿದ್ಯುದ್ದೀಕರಣ ಪೂರ್ಣ
ನೇರಳೆ ಮತ್ತು8 ಹಸಿರು ಮಾರ್ಗದಲ್ಲಿರುವ ರೈಲುಗಳ ಸೇವೆಯನ್ನು ರಾತ್ರಿ 11;45ರ ವರೆಗೆ ವಿಸ್ತರಿಸಲಾಗಿದ್ದು, ಡಿಸೆಂಬರ್​ 3ರಂದು ಪೇಪರ್​ ಟಿಕೆಟ್​ಗಳನ್ನು ಹಂಚಲಾಗುವುದು ಎಂದು ತಿಳಿಸಿದೆ.  ಬರುವ ಮತ್ತು ಹೋಗುವ ಪ್ರಯಾಣಕ್ಕೆ 50 ರೂಪಾಯಿ ಟಿಕೆಟ್ ನಿಗದಿಪಡಿಸಿ ಬಿಎಂಆರ್​ಸಿಎಲ್ ಪ್ರಕಟಣೆ ಹೊರಡಿಸಿದೆ.
ಬೆಂಗಳೂರಿನ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲೂ ಪೇಪರ್ ಟಿಕೆಟ್​ ಲಭ್ಯವಾಗಲಿದೆ. ಪೇಪರ್ ಕಾರ್ಡ್​ಗಳ ಜೊತೆಗೆ ಸ್ಮಾರ್ಟ್ ಕಾರ್ಡ್ ಹಾಗೂ ಎನ್​ಸಿಎಂಸಿ ವ್ಯವಸ್ಥೆಯನ್ನು ಕೂಡ ಪ್ರಯಾಣಿಕರು ಉಪಯೋಗಿಸಬಹುದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 1 =
Remember me
