ಬೆಂಗಳೂರು:ರಾಜಧಾನಿ ಬೆಂಗಳೂರಿನ ಪ್ರಮುಖ ಸಮೂಹಸಾರಿಗೆಯಲ್ಲಿ ಒಂದಾಗಿರುವ ನಮ್ಮ ಮೆಟ್ರೋ ನಾಲ್ಕು ದಿನಗಳ ಕಾಲ ಸಂಚಾರವನ್ನು ಸ್ಥಗಿತಗೊಳಿಸಲಿದೆ. ವಿಸ್ತರಣಾ ಮಾರ್ಗ ಕಾರ್ಯಾರಂಭಕ್ಕೆ ಸಂಬಂಧಿಸಿದಂತೆ ನಿಯೋಜಿತ ಕಾಮಗಾರಿಗಳಿಗಾಗಿ ಈ ಕ್ರಮಕೈಗೊಳ್ಳಲಾಗುತ್ತಿದೆ ಎಂದ ನಮ್ಮ ಮೆಟ್ರೋ ತಿಳಿಸಿದೆ.
ಕೆಂಗೇರಿಯಿಂದ ಚಲ್ಲಘಟ್ಟದವರೆಗಿನ ವಿಸ್ತರಣಾ ಮಾರ್ಗದ ಕಾರ್ಯಾರಂಭಕ್ಕೆ ಸಂಬಂಧಿಸಿದ ನಿಯೋಜಿತ ಕಾಮಗಾರಿಗಳಿಗಾಗಿ, ಮೈಸೂರು ರಸ್ತೆ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ನೇರಳ ಮಾರ್ಗದ ಮೆಟ್ರೋ ರೈಲು ಸೇವೆಗಳನ್ನು ಜ.27ರಿಂದ 30ರ ವರೆಗೆ ಒಟ್ಟು ನಾಲ್ಕು ದಿನಗಳ ಅವಧಿಗೆ ಸ್ಥಗಿತಗೊಳಿಸಲಾಗುವುದು ಎಂದು ಮೆಟ್ರೋ ತಿಳಿಸಿದೆ.
ಆದರೆ ಈ ಅವಧಿಯಲ್ಲಿ ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳು ಲಭ್ಯವಿರುತ್ತವೆ. ಬೈಯಪ್ಪನಹಳ್ಳಿಯಿಂದ ಕಂಗೇರಿವರೆಗಿನ ಮಾರ್ಗದಲ್ಲಿ ರೈಲು ಸೇವೆಗಳು ಜ.31ರ ಬೆಳಗ್ಗೆ 5ರಿಂದ ವೇಳಾಪಟ್ಟಿ ಪ್ರಕಾರ ಪುನರಾರಂಭಗೊಳ್ಳಲಿದೆ.
ಇದನ್ನೂ ಓದಿ:ಕ್ರೌರ್ಯ ಮೆರೆಯುತ್ತಿದ್ದವನನ್ನು ಸಾರ್ವಜನಿಕರೇ ಹಿಡಿದು ಬಾರಿಸಿದ್ರು; ಕೊಲೆಗೆ ಯತ್ನಿಸಿದವನನ್ನು ಪೊಲೀಸರಿಗೆ ಒಪ್ಪಿಸಿದ್ರು
ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವಿನ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಮತ್ತು ರೈಲುಗಳು ವೇಳಾಪಟ್ಟಿ ಪ್ರಕಾರ ಲಭ್ಯವಿರುತ್ತವೆ.
ನೇರಳೆ ಮಾರ್ಗದ ರೈಲು ಸಂಚಾರ ಸ್ಥಗಿತದಿಂದ ಪ್ರಯಾಣಿಕರಿಗೆ ಆಗುವ ಅನನುಕೂಲಕ್ಕಾಗಿ ವಿಷಾದಿಸುತ್ತೇವೆ ಮತ್ತು ಕೆಂಗೇರಿಯಿಂದ ಚಲಘಟ್ಟದವರೆಗಿನ ವಿಸ್ತರಣಾ ಮಾರ್ಗದ ಕಾಮಗಾರಿಗಳನ್ನು ತ್ವರಿತಗೊಳಿಸಲು ಸಹಕರಿಸಿ ಎಂದು ಮೆಟ್ರೋ ಸಂಸ್ಥೆ ಕೋರಿಕೊಂಡಿದೆ.
8 ತಿಂಗಳ ಗರ್ಭಿಣಿಗೆ 1 ವಾರವೂ ಸಮಯ ಕೊಡದೆ ಕೆಲಸದಿಂದ ಕಿತ್ತು ಹಾಕಿದ ಗೂಗಲ್!

ಸಂಜೆ ಸ್ನೇಹಿತರ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯಲ್ಲಿದ್ದ ಒಂದು ಕೆ.ಜಿ. ಚಿನ್ನಾಭರಣ ಕಳವು!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:sixteen − six =
Remember me
