ಬೆಂಗಳೂರು:ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದ್ದು, ನಮ್ಮ ಮೆಟ್ರೋ ಸೇವೆಯಲ್ಲಿ ಎರಡು ಗಂಟೆಗಳ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಸೂಚನೆ ನೀಡಿದೆ.
ಇದನ್ನೂ ಓದಿ:ಹಿಜಾಬ್ ಧರಿಸಿ ಶಸ್ತ್ರಚಿಕಿತ್ಸೆ ಮಾಡುವುದು ಕಷ್ಟ: ಪರ್ಯಾಯ ಆಯ್ಕೆ ಕೇಳಿದ ವೈದ್ಯ ವಿದ್ಯಾರ್ಥಿನಿಯರ ಮನವಿ ತಿರಸ್ಕೃತ
ಮೆಟ್ರೋ ರೈಲು ನಿಗಮವು ದಿನಾಂಕ 02.07.2023 ರಂದು(ಭಾನುವಾರ) ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನೇರಳ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ. ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ಸೇವೆಯನ್ನು ಬೆಳಿಗ್ಗೆ 07.00 ಗಂಟೆಯಿಂದ 9.00 ಗಂಟೆಯವರೆಗೆ ಎರಡು ಗಂಟೆಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಕೆಂಗೇರಿ ಮತ್ತು ಎಂ.ಜಿ ರಸ್ತೆ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ, ಕೃಷ್ಣರಾಜಪುರ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ವಿಭಾಗಗಳ ರೈಲುಗಳ ಸೇವೆಯು ಆಯಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07.00 ಗಂಟೆಗೆ ಎಂದಿನಂತೆ ವೇಳಾಪಟ್ಟಿಯ ಪ್ರಕಾರ ಸಂಚರಿಸಲಿದೆ.
ಇದನ್ನೂ ಓದಿ:ಎಸ್ಎಸ್ಎಲ್​​ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಹಾಜರಾದ ವಿದ್ಯಾರ್ಥಿಗಳೆಷ್ಟು, ಉತ್ತೀರ್ಣರಾದವರೆಷ್ಟು?
ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕಾಗಿದ್ದು, ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ಬಿಎಂಆರ್​​ಸಿಎಲ್ ಮಾಹಿತಿ ನೀಡಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 3 =
Remember me
