ಪ್ರತಿದಿನ ಸಾವಿರಾರು ಪ್ರಯಾಣಿಕರ ಪ್ರಯಾಣದ ಒಡನಾಡಿಯಾದ ಬೆಂಗಳೂರು ಮೆಟ್ರೋ ಕುರಿತು ಮಹತ್ವದ ಸುದ್ದಿಯೊಂದಿದೆ.ರೋಹಳ್ಳಿ ಕೈಗಾರಿಕಾ ಕೇಂದ್ರಕ್ಕೆ ನಮ್ಮ ಮೆಟ್ರೋ ಸೇವೆಗಳ ವಿಸ್ತರಣೆ ಆಗಬೇಕಿದೆ. ಹಾರೋಹಳ್ಳಿಯವರೆಗೂ ನಮ್ಮ ಮೆಟ್ರೋ ವಿಸ್ತರಣೆಯಾಗಲಿದೆ ಎಂಬ ಚರ್ಚೆ ಶುರುವಾಗಿದೆ.ಸದ್ಯ ಈ ಮಹತ್ವದ ಹೇಳಿಕೆಯನ್ನ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸಂಸದರಾಗಿ ಆಯ್ಕೆಯಾದ ಡಾ. ಸಿ ಎನ್ ಮಂಜುನಾಥ್ ನೀಡಿದ್ದಾರೆ.
ಹಾರೋಹಳ್ಳಿ ಕೈಗಾರಿಕಾ ಕೇಂದ್ರಕ್ಕೆ ನಮ್ಮ ಮೆಟ್ರೋ ಸೇವೆಗಳ ವಿಸ್ತರಣೆ ಆಗಬೇಕಿದೆ. ಹಾರೋಹಳ್ಳಿಯವರೆಗೂ ನಮ್ಮ ಮೆಟ್ರೋ ವಿಸ್ತರಣೆ ಮಾಡುವಂತೆ ನಾನು ಬಲವಾಗಿ ಒತ್ತಾಯಿಸುತ್ತಿದ್ದೇನೆ ಎಂದು ಅವರು ಹೇಳಿಕೆ ನೀಡಿದ್ದಾರೆ.
ಅಲ್ಲದೇ ಹಾರೋಹಳ್ಳಿವರೆಗೆ ನಮ್ಮ ಮೆಟ್ರೋ ವಿಸ್ತರಣೆ ಮಾಡುವುದು ಈ ಪ್ರದೇಶದಲ್ಲಿ ಕೈಗಾರಿಕೆಗಳ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಅಲ್ಲದೇ ಒಂದೇ ಪ್ರದೇಶದ ಜನದಟ್ಟಣೆಯನ್ನು ಕಡಿಮೆ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.
ಸಂದರ್ಶನವೊಂದರಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸಂಸದರಾಗಿ ಆಯ್ಕೆಯಾದ ಡಾ. ಸಿ ಎನ್ ಮಂಜುನಾಥ್ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ, ಈ ಮೂಲಕ ಹಾರೋಹಳ್ಳಿ ಪ್ರದೇಶಕ್ಕೆ ನಮ್ಮ ಮೆಟ್ರೋ ವಿಸ್ತರಣೆ ಆಗುವ ನಿರೀಕ್ಷೆ ಹುಟ್ಟಿಕೊಂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + two =
Remember me
