ತುಮಕೂರು:ಮದ್ಯ ಸೇವಿಸಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಪುಂಡನೊಬ್ಬ ಬ್ಲೇಡ್​ನಿಂದ ವ್ಯಕ್ತಿಯ ಕುತ್ತಿಗೆ ಕುಯ್ದ ಘಟನೆ ತುಮಕೂರಿನ ಸದಾಶಿವನಗರದ 4ನೇ ಮುಖ್ಯರಸ್ತೆಯಲ್ಲಿ ಸಂಭವಿಸಿದೆ.ಹಾಡಹಗಲೇ ಬ್ಲೇಡ್​ನಿಂದ ಕುತ್ತಿಗೆ ಕುಯ್ದು ಪುಂಡಾಟ ಮೇರೆದ ಕುಡುಕನನ್ನು ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು ಆತ ಪರಾರಿಯಾಗದಂತೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ:ಕಾಂಡೋಮ್​ ಖರೀದಿ ಮಾಡಿದವರ ಮಾಹಿತಿ ಲೀಕ್​! ಸಂಶೋಧನೆಯಲ್ಲಿ ಆಘಾತಕಾರಿ ಸಂಗತಿ ಬಯಲು
ಚಿತ್ರದುರ್ಗ ಮೂಲದ ಹನುಮಂತ ಎಂಬ ವ್ಯಕ್ತಿ ತನ್ನ ಪತ್ನಿ ಮತ್ತು ಮಕ್ಕಳೊಂದಿಗೆ ದಿನಸಿ ಖರೀದಿಸಲು ಅಂಗಡಿಗೆ ಆಗಮಿಸಿದ್ದರು. ಈ ವೇಳೆ ಅಲ್ಲೇ ರಸ್ತೆಬದಿ ನಿಂತಿದ್ದ ಪುಂಡನೊಬ್ಬ ಹನುಮಂತನ ಬಳಿ ಬಂದು ತನಗೆ ಮದ್ಯ ಸೇವಿಸಲು ಹಣ ಕೊಡುವಂತೆ ಪೀಡಿಸಿದ್ದಾನೆ. ಇಬ್ಬರ ಮಧ್ಯೆ ಒಂದಷ್ಟು ಮಾತಿನ ಚಕಮಕಿ ನಡೆದಿದೆ. ಯಾವಾಗ ಹನುಮಂತು ದುಡ್ಡು ಕೊಡಲು ನಿರಾಕರಿಸಿದರೋ ತಕ್ಷಣವೇ ಬ್ಲೇಡ್​ನಿಂದ ಅವರ ಕುತ್ತಿಗೆ ಕುಯ್ದು ಪರಾರಿಯಾಗಲು ಪುಂಡ ಯತ್ನಿಸಿದ್ದಾನೆ.
ಕುಡುಕನ ವರ್ತನೆ ನೋಡಿ ಬೇಸತ್ತ ಸಾರ್ವಜನಿಕರು ಆತನನ್ನು ಹಿಡಿದು ಚಪ್ಪಲಿಯಲ್ಲಿ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಾಳು ಹನುಮಂತುಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳೆದ ಎರಡು ದಿನಗಳ ಹಿಂದೆ ನಡೆದಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.
ಅಬ್ಬಾ! ಎಂತಹ ಜಾಗದಲ್ಲಿ ಅಡಗಿದೆ MH370 ವಿಮಾನ: ನಿಗೂಢ ನಾಪತ್ತೆ ಕೇಸ್​ ಬಗೆಹರಿದಿದೆ ಎಂದ ವಿಜ್ಞಾನಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − nine =
Remember me
