ಬೆಂಗಳೂರು:ತೆಲುಗು ಸಿನಿಮಾ ರಂಗದಲ್ಲಿ ಅನನ್ಯ ಸೇವೆಗೈದ ಸಾಧಕರಿಗೆ ಕೊಡ ಮಾಡುವ ನಂದಿ ಪ್ರಶಸ್ತಿ ಈಗ ಕನ್ನಡದಲ್ಲಿಯೂ ಪ್ರಾರಂಭವಾಗುತ್ತಿದೆ. ಅದರ ಮೊದಲ ಭಾಗ ಎನ್ನುವಂತೆ ನಂದಿ ಪ್ರಶಸ್ತಿಯ ಲಾಂಛನ ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅದರ ಲೋಗೋ ಲಾಂಚ್ ಮಾಡಿ ಶುಭ ಕೋರಿದ್ದಾರೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ. ಹರೀಶ್ ನೇತೃತ್ವದಲ್ಲಿ ನಿನ್ನೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಲೋಗೋ ಅನಾವರಣ ಮಾಡಿಸಿದ್ದಾರೆ. ಅನಿತಾ ರೆಡ್ಡಿ, ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್, ಭಾಮಾ ಗಿರೀಶ್, Aiplex ಗಿರೀಶ್ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ:ಕರ್ತವ್ಯದಲ್ಲಿದ್ದ ಪೊಲೀಸ್ ಕುಸಿದು ಬಿದ್ದು ಸಾವು; ನಿಲ್ಲದ ಹಠಾತ್ ಹೃದಯಾಘಾತ ಪ್ರಕರಣಗಳು..
ನಂದಿ ಹೆಸರಿನಲ್ಲಿ ಪ್ರಶಸ್ತಿ ಕೊಡಬೇಕೆಂದು ಸಿನಿಮಾ ರಂಗದ ಸ್ನೇಹಿತರ ಜತೆ ಚರ್ಚಿಸಿ ಈ ತೀರ್ಮಾನ ಮಾಡಲಾಗಿದೆ ಎಂದು ಅಧ್ಯಕ್ಷ ಭಾ.ಮಾ.ಹರೀಶ್ ತಿಳಿಸಿದ್ದಾರೆ. ನವೆಂಬರ್ ತಿಂಗಳಲ್ಲಿ ಪ್ರಶಸ್ತಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ. ಪ್ರತಿ ವರ್ಷ ಸಿನಿಮಾ ರಂಗದಲ್ಲಿ ಸಾಧನೆ ಮಾಡಿದ ಕಲಾವಿದರನ್ನು ಸನ್ಮಾನಿಸಿ ಗೌರವಿಸಿ ನಂದಿ ಪ್ರಶಸ್ತಿ ನೀಡಲಾಗುತ್ತದೆ.
ಸದ್ಯ ನಂದಿ ಪ್ರಶಸ್ತಿ ಲೋಗೋ ಬಿಡುಗಡೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಕಾರ್ಯಕ್ರಮ ರೂಪುರೇಷೆಗಳನ್ನು ತಿಳಿಸಲಾಗುತ್ತದೆ. ಸೈಮಾ, ಫಿಲಂಫೇರ್​ ಮಾದರಿಯಲ್ಲಿಯೇ ಕನ್ನಡ ಸಿನಿಮಾರಂಗಕ್ಕೆ ಪ್ರತ್ಯಕ್ಷ ಪ್ರಶಸ್ತಿ ನಂದಿ ಎಂದು ಭಾ.ಮಾ.ಹರೀಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರೀತಿ ಇದ್ದರೂ ಪತ್ನಿ ಯಾಕೆ ಪತಿಯಿಂದ ವಿಮುಖಳಾಗುತ್ತಾಳೆ?; ಇದು ವಿವಾಹಿತರಿಗೊಂದು ಕಿವಿಮಾತು, ಎಚ್ಚರಿಕೆ ಕೂಡ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 3 =
Remember me
