ಚಿಕ್ಕಬಳ್ಳಾಪುರ: ರಾಜ್ಯದ ಪ್ರಖ್ಯಾತ ಪ್ರವಾಸಿ ತಾಣ ನಂದಿ ಬೆಟ್ಟದ ತುತ್ತ ತುದಿಗೆ ವಾರದ 5 ದಿನಗಳು ವಾಹನಗಳ ಪ್ರವೇಶ ನಿಷೇಧಿಸಲಾಗಿದೆ.
ಬೆಟ್ಟದ ಪ್ರವೇಶ ದ್ವಾರದ ಬಳಿ ಇರುವ ಟಿಕೆಟ್​ ಕೌಂಟರ್​ ಬಳಿಯಿಂದ ಬೆಟ್ಟದ ತುದಿಗೆ ಸೋಮವಾರದಿಂದ ಶುಕ್ರವಾರದವರೆಗೆ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ. ಆದರೆ ಶನಿವಾರ ಹಾಗೂ ಭಾನುವಾರ ಮಾತ್ರ ಬೆಟ್ಟದ ತುದಿವರೆಗೂ ವಾಹನಗಳ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ನಂದಿಬೆಟ್ಟದ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ತಿಳಿಸಿದರು.
ಟಿಕೆಟ್​ ಕೌಂಟರ್​ ಬಳಿ ವಾಹನಗಳ ಪಾರ್ಕಿಂಗ್​​ಗೆ ಅವಕಾಶ ಕಲ್ಪಿಸಲಾಗಿದೆ. ಪಾರ್ಕಿಂಗ್​ನಲ್ಲಿ ವಾಹನ ನಿಲ್ಲಿಸಿ ಬೆಟ್ಟದ ತುದಿ ಏರಬೇಕು. ಶನಿವಾರ ಹಾಗೂ ಭಾನುವಾರ ಸಾವಿರಾರು ಮಂದಿ ಪ್ರವಾಸಿಗರು ಆಗಮಿಸುವುದರಿಂದ ವಾಹನ ನಿಲ್ಲಿಸಲು ಸ್ಥಳ ಇಲ್ಲದ ಕಾರಣ ತುದಿಗೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.ಅಧಿಕ ವಾಹನಗಳ ಸಂಚಾರದಿಂದ ಬೆಟ್ಟದ ಪರಿಸರ ಮಲಿನಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಬೆಟ್ಟದ ಬುಡದಲ್ಲೇ ವಾಹನಗಳನ್ನು ನಿರ್ಬಂಧಿಸಲು ಚಿಂತನೆ ನಡೆಸಲಾಗುತ್ತಿದೆ. ಅಲ್ಲಿಂದ ವಿಶೇಷ ವಾಹನಗಳಲ್ಲಿ ಪ್ರವಾಸಿಗರನ್ನು ಬೆಟ್ಟದ ತುದಿಗೆ ಕರೆದೊಯ್ಯುವ ಚಿಂತನೆ ಕೂಡ ಇದೆ ಎಂದು ಅವರು ಮಾಹಿತಿ ನೀಡಿದರು. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + twenty =
Remember me
