ಬೆಂಗಳೂರು:ಹುಚ್ಚನಂತೆ ಪ್ರೀತಿಸಿದ ಯುವತಿ ನನ್ನ ಪ್ರೀತಿಗೆ ಒಲ್ಲೆ ಎಂದಳು ಎನ್ನುವ ಕಾರಣಕ್ಕೆ ಆಕೆಯ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿದ್ದ ಪಾಗಲ್​ ಪ್ರೇಮಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ದೀಪಕ್​ (32) ಬಂಧಿತ ಪಾಗಲ್​ ಪ್ರೇಮಿ. ಈತ ಕಳೆದ ಎರಡು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದ. ಅದರೆ ಕಳೆದ ವರ್ಷ ಆಗಸ್ಟ್​ನಲ್ಲಿ ಲವ್ ಬ್ರೇಕ್ ಅಪ್ ಅಗಿತ್ತು. ನಿನ್ನನ್ನು ಪ್ರೀತಿಸಲು ಸಾಧ್ಯವಿಲ್ಲ ಎಂದು ಯುವತಿ ದೀಪಕ್​ನಿಂದ ದೂರಾಗಿದ್ದಳು. ಬಳಿಕ ಆತನ ಜತೆ ಸಂಪರ್ಕ ಕಡಿತಗೊಳಿಸಿದ್ದಳು.
ಆದರೆ ಅಷ್ಟಕ್ಕೆ ಸುಮ್ಮನಾಗದ ದೀಪಕ್​ ಹಲವಾರು ಬಾರಿ ಬೇರೆ ಬೇರೆ ಫೋನ್ ನಂಬರ್​​ನಿಂದ ಕರೆ ಮಾಡಿ ಹಿಂಸೆ ನೀಡಿದ್ದ. ಕಳೆದ ಹದಿನೈದು ದಿನದ ಹಿಂದೆ ಯುವತಿ ಮನೆ ಬಳಿ ಹೋಗಿ ಗಲಾಟೆ ಮಾಡಿದ್ದ. ಜನವರಿ 25ರಂದು ಬೈಕ್​ನಲ್ಲಿ ಹೋಗುತ್ತಿದ್ದ ವೇಳೆ ಯುವತಿಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಬೆನ್ನು, ಹೊಟ್ಟೆ, ತಲೆ, ಕೈಗೆ ಚಾಕುವಿನಿಂದ ಚುಚ್ಚಿದ್ದಾನೆ. ಈ ಹಿನ್ನಲೆಯಲ್ಲಿ ಯುವತಿ ನಂದಿನಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದಳು. ದೀಪಕ್​ಗಾಗಿ ಬಲೆ ಬೀಸಿದ್ದ ಪೊಲೀಸರು ಫೆ. 7ರಂದು ಆತನನ್ನು ಬಂಧಿಸಿದ್ದಾರೆ. (ದಿಗ್ವಿಜಯ ನ್ಯೂಸ್​)
ಗೌರಿ, ಕಲ್ಬುರ್ಗಿಯಂತೆ ನನ್ನ ಹತ್ಯೆ: ವಕೀಲೆಯಿಂದ ಮುಖಕ್ಕೆ ಮಸಿ ಬಳಿಸಿಕೊಂಡ ಭಗವಾನ್​ ಆರೋಪ

ಉತ್ತರಾಖಂಡದಲ್ಲಿ ಮತ್ತೆ ಹಿಮ ಯಮ: ಹಿಮಪರ್ವತ ಕುಸಿದು ಒಡೆದ ಡ್ಯಾಂ, ಹೆಚ್ಚಿದ ಪ್ರವಾಹ ಭೀತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 12 =
Remember me
