ಬೆಂಗಳೂರು:ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ.15 ಹೆಚ್ಚಳವಾಗಿದೆ. ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್‌ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್​ಗೆ ಏರಿಕೆಯಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು, ಯಾವುದೇ ಕಾರಣಕ್ಕೂ ಅವರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಒಂದು ಲೀಟರ್‌ ಹಾಲಿನ ಪ್ಯಾಕೇಟಿಗೆ ಹೆಚ್ಚುವರಿಯಾಗಿ 50 ಮಿ.ಲೀ ಹಾಲನ್ನು ಸೇರಿಸಿ, ಈ ಹೆಚ್ಚುವರಿ ಹಾಲಿನ ಬೆಲೆ 2 ರೂಪಾಯಿಯನ್ನು ಮಾತ್ರ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ. ಹಾಲಿನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರುವುದಿಲ್ಲ ಎಂದು ಸಿಎಂ ಹೇಳಿದರು.
ಇದನ್ನೂ ಓದಿ:737 ಮ್ಯಾಕ್ಸ್‌ ವಿಮಾನ ಮಾರಾಟ ಕುಸಿತ: ಬೋಯಿಂಗ್‌ ಕಂಪನಿ ಷೇರುಗಳ ಬೆಲೆ ಪಾತಾಳಕ್ಕೆ
“ಈವರೆಗೆ 1,000 ಮಿ.ಲೀ ಹಾಲಿಗೆ ರೂ.42 ಹಾಗೂ 500 ಮಿ.ಲೀ ಹಾಲಿಗೆ ರೂ.22 ದರವನ್ನು ನಿಗದಿಪಡಿಸಲಾಗಿತ್ತು. ಇನ್ನು ಮುಂದೆ 1,050 ಮಿ.ಲೀ ಹಾಗೂ 550 ಮಿ.ಲೀ ಹಾಲಿನ ಪ್ಯಾಕೇಟ್​ಗಳನ್ನು ಮಾರಾಟ ಮಾಡಲಾಗುತ್ತಿದ್ದು, ಅದಕ್ಕೆ ಕ್ರಮವಾಗಿ ರೂ.44 ಹಾಗೂ ರೂ.24 ದರ ನಿಗದಿಪಡಿಸಲಾಗುತ್ತದೆ. ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆ.ಎಂ.ಎಫ್‌ ಸಂಸ್ಥೆಯು ತೆಗೆದುಕೊಂಡ ನಿರ್ಣಯವಾಗಿದ್ದು, ಹೆಚ್ಚುವರಿಯಾಗಿ ಉದ್ಪಾದನೆಯಾಗುತ್ತಿರುವ ಹಾಲನ್ನು ಗ್ರಾಹಕರಿಗೆ ಹೊರೆಯಾಗದ ರೀತಿಯಲ್ಲಿ ತಲುಪಿಸುವ ಸದುದ್ದೇಶವನ್ನು ಕೂಡ ಇದು ಹೊಂದಿದೆ” ಎಂದರು.
ಇದನ್ನೂ ಓದಿ:ಹಾಲಿನ ಪ್ರೋತ್ಸಾಹ ಬಿಡುಗಡೆಗೆ ಆಗ್ರಹ: ಮಂಡ್ಯದಲ್ಲಿ ರೈತ ಸಂಘದಿಂದ ಪ್ರತಿಭಟನೆ
“ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ರಾಜ್ಯದಲ್ಲಿ ನಿತ್ಯ ಸರಾಸರಿ 72 ಲಕ್ಷ ಲೀಟರ್​ಗಳಷ್ಟು ಹಾಲು ಸಂಗ್ರಹವಾಗುತ್ತಿತ್ತು. ಈ ಹಿಂದೆ ಹಾಲಿನ ಬೆಲೆಯಲ್ಲಿ ರೂ.3 ಹೆಚ್ಚಳ ಮಾಡಿ, ಆ ಹೆಚ್ಚುವರಿ ಹಣವನ್ನು ರೈತರಿಗೆ ನೇರವಾಗಿ ವರ್ಗಾಯಿಸುವ ಪ್ರೋತ್ಸಾಹದಾಯಕ ಕ್ರಮ ಕೈಗೊಂಡಿದ್ದರಿಂದ ಹೈನೋದ್ಯಮವು ಹಿಂದಿಗಿಂತ ಲಾಭ ತಂದುಕೊಡುವ ಉದ್ಯೋಗವಾಯಿತು. ಜೊತೆಗೆ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಜಾನುವಾರುಗಳಿಗೆ ಹಸಿರು ಮೇವು ಲಭ್ಯವಾಗುತ್ತಿದೆ. ಈ ಎರಡು ಕಾರಣಗಳಿಂದಾಗಿ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಇಂದು ನಿತ್ಯ ಸರಿಸುಮಾರು 1 ಕೋಟಿ ಲೀಟರ್‌ ತಲುಪುವ ಹಂತಕ್ಕೆ ಬಂದಿದೆ” ಎಂದು ಹೇಳಿದರು.
“ಈಗಾಗಲೇ ಗರಿಷ್ಟ ಪ್ರಮಾಣದ ಹಾಲನ್ನು ಹಾಲಿನ ಪೌಡರ್‌ ತಯಾರಿಕೆ ಮಾಡುವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ನಿತ್ಯ ಸುಮಾರು 30 ಲಕ್ಷ ಲೀಟರ್‌ ಹಾಲು ಪೌಡರ್‌ ತಯಾರಿಕೆಗಾಗಿ ಬಳಸಲ್ಪಡುತ್ತಿದ್ದು, 250 ಮೆಟ್ರಿಕ್‌ ಟನ್‌ ಹಾಲಿನ ಪೌಡರ್‌ ತಯಾರಿಸಲಾಗುತ್ತಿದೆ. ಇದು ಹಾಲಿನ ಪೌಡರ್​ಗೆ ಇರುವ ಬೇಡಿಕೆಗೆ ಅನುಗುಣವಾಗಿದೆ. ಈಗ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತಿರುವ ಹಾಲನ್ನು ರೈತರಿಂದ ಖರೀದಿಸಿ, ಗ್ರಾಹಕರಿಗೂ ಹೊರೆಯಾಗದ ರೀತಿಯಲ್ಲಿ ಮಾರಾಟ ಮಾಡುವ ಸಲುವಾಗಿ ಕೆ.ಎಂ.ಎಫ್‌ ಸಂಸ್ಥೆ ಈ ನಿರ್ಧಾರ ಕೈಗೊಂಡಿದೆ” ಎಂದಿದ್ದರು.
ಎದೆಯಲ್ಲಿ ಕುದಿಯುತ್ತಿದ್ದ ಸೇಡು ಜ್ವಾಲೆಯಂತೆ ಸ್ಫೋಟ; ಈ ಕ್ಷಣಕ್ಕಾಗಿಯೇ ಕಾದು ಕುಳಿತಿದ್ದರು ಅಭಿಮಾನಿಗಳು

ಭಾರತದ ಹೆಡ್​ ಕೋಚ್​ ಆಗುವುದಾದರೆ… ಗೌತಮ್ ಗಂಭೀರ್​ ಮುಂದಿಟ್ಟ 5 ಬೇಡಿಕೆಗಳಿಗೆ ದಂಗಾದ ಬಿಸಿಸಿಐ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 8 =
Remember me
