ಮಂಗಳೂರು: ಮಂಗಳೂರು ನಗರ ಕಮಿಷನರೇಟ್‌ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಡಿ ವಶಪಡಿಸಿಕೊಳ್ಳಲಾಗಿದ್ದ 1,28,74,700 ರೂ. ಮೌಲ್ಯದ ಮಾದಕ ವಸ್ತುಗಳನ್ನು ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳ ಸಾಗಣೆ ವಿರೋಧಿ ದಿನದ ಅಂಗವಾಗಿ ಭಾನುವಾರ ನಾಶಪಡಿಸಲಾಯಿತು.ಕಮಿಷನರೇಟ್‌ ವ್ಯಾಪ್ತಿಯ 15 ಠಾಣೆಗಳಲ್ಲಿ 580.860 ಕೆ.ಜಿ. ಗಾಂಜಾ (1,16,17,200 ರೂ ಮೌಲ್ಯ), 25 ಗ್ರಾಂ ಹೆರಾಯಿನ್‌ (1,37,500 ರೂ.) ಮತ್ತು 320 ಗ್ರಾಂ ಎಂಡಿಎಂ (11,20,000 ರೂ. ಮೌಲ್ಯ)ನ್ನು ಪೊಲೀಸರು ವಿವಿಧ ಪ್ರಕರಣಗಳಡಿ ವಶ ಪಡಿಸಿಕೊಂಡಿದ್ದರು. ನ್ಯಾಯಾಲಯ ಆದೇಶದಂತೆ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ಉಪಸ್ಥಿತಿಯಲ್ಲಿ ಭಾನುವಾರ ಅವೆಲ್ಲವನ್ನು ಮೂಲ್ಕಿಯ ರಾಮ್ಕಿ ಎನರ್ಜಿ ಮತ್ತು ಎನ್ವಿರಾನ್‌ಮೆಂಟ್‌ ಲಿ. ಸಂಸ್ಥೆಯಲ್ಲಿ ನಾಶ ಪಡಿಸುವ ಪ್ರಕ್ರಿಯೆ ನಡೆಯಿತು. ಉನ್ನತ ಪೊಲೀಸ್‌ ಅಧಿಕಾರಿಗಳು, ವಿವಿಧ ಠಾಣಾಧಿಕಾರಿಗಳು, ಸಿಬ್ಬಂದಿ ಈ ವೇಳೆ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 9 =
Remember me
