ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಳೆದ ಬುಧವಾರ ಸದನದಲ್ಲಿ ಮಾತನಾಡುತ್ತಾ, ಇದು ನನ್ನ ವಿದಾಯ. ಇನ್ನು ಮುಂದೆ ನಾನು ವಿಧಾನಸಭೆಗೆ ಬಂದು ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದೀಗ ಯಡಿಯೂರಪ್ಪ ಅವರ ವಿದಾಯದ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ಮೆಚ್ಚಿ, ಟ್ವೀಟ್ ಮಾಡಿದ್ದಾರೆ.
ಬಿಎಸ್ ಯಡಿಯೂರಪ್ಪ ಅವರು ಮಾಡಿರುವ ವಿದಾಯ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ಮೋದಿ ಟ್ವೀಟ್ ಬರೆದುಕೊಂಡಿದ್ದಾರೆ.ಇದನ್ನೂ ಓದಿ:ಉಡುಪಿಯಲ್ಲಿ ಮಾದಕ ದ್ರವ್ಯ ಸೇವಿಸುತ್ತಿದ್ದ 42 ವಿದ್ಯಾರ್ಥಿಗಳು ಅಮಾನತು; ಎಡಿಜಿಪಿ ಅಲೋಕ್ ಕುಮಾರ್ ಸೂಚನೆಯಂತೆ ಕ್ರಮ
ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ.https://t.co/tdpgUXqRAz— Narendra Modi (@narendramodi)February 24, 2023
ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ.https://t.co/tdpgUXqRAz
ಸದನದಲ್ಲಿ ಬಿಎಸ್​ವೈ ಮಾತನಾಡುತ್ತಾ, ನನ್ನನ್ನ ಬಿಜೆಪಿ ಕಡೆಗಣಿಸಿ ಅನ್ಯಾಯ ಮಾಡಿದೆ ಎಂಬ ಮಾತುಗಳನ್ನು ಸಾಕಷ್ಟು ಬಾರಿ ಕೇಳಿದ್ದೇನೆ. ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರು ಎಂದಿಗೂ ನನ್ನನ್ನು ನಿರ್ಲಕ್ಷಿಸಿಲ್ಲ. ಪಕ್ಷ ಅವಕಾಶ ನೀಡಿದ್ದರಿಂದ ನಾಲ್ಕು ಬಾರಿ ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು. ನನಗೆ ಸಿಕ್ಕಿರುವ ಅವಕಾಶಗಳು ಬೇರೆ ಯಾರಿಗೂ ಸಿಕ್ಕಿಲ್ಲ ಎಂದು ಹೇಳಿದ್ದರು.ಇದನ್ನೂ ಓದಿ:ಜೆಡಿಎಸ್ ಜಿಲ್ಲಾಧ್ಯಕ್ಷರ ಕಾರು ಹಾಗೂ ಟ್ಯಾಂಕರ್ ನಡುವೆ ಅಪಘಾತ; ಮೂವರು ಗಂಭೀರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 1 =
Remember me
