
ವಿಜಯವಾಣಿ ಸುದ್ದಿಜಾಲ ಬೆಂಗಳೂರುನಗರದಲ್ಲಿ ಸ್ಫೋಟಿಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಟಿ. ನಾಸೀರ್‌ನನ್ನು ಶುಕ್ರವಾರ ಸಿಸಿಬಿ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.ಎನ್‌ಐಎ ವಿಶೇಷ ನ್ಯಾಯಾಲಯ ಆರೋಪಿಯನ್ನು ಗುರುವಾರ ೮ ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದ ಸಿಸಿಬಿ ಎಸಿಪಿ ಕುಮಾರ್ ನೇತೃತ್ವದ ತಂಡ ಜೈಲಿನ ಪ್ರಕ್ರಿಯೆಗಳನ್ನು ಮುಗಿಸಿ ನಾಸೀರ್‌ನನ್ನು ತಮ್ಮ ವಶಕ್ಕೆ ಪಡೆದು ಕೆಎಸ್‌ಆರ್‌ಪಿ ವಾಹನದಲ್ಲಿ ಬಿಗಿ ಭದ್ರತೆಯಲ್ಲಿ ಕರೆ ತರಲಾಗಿದೆ. ನಾಸೀರ್‌ನನ್ನು ಸದ್ಯ ಮಡಿವಾಳದ ಎ್ಎಸ್‌ಎಲ್ ಕೇಂದ್ರದಲ್ಲಿ ಇರಿಸಿ ವಿಚಾರಣೆ ನಡೆಸಲಾಗುತ್ತಿದೆ. ಶಂಕಿತ ಉಗ್ರರ ವಿಚಾರಣೆ ಹಿನ್ನೆಲೆಯಲ್ಲಿ ಎ್ಎಸ್‌ಎಲ್ ಕೇಂದ್ರಕ್ಕೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ನಾಸೀರ್ ಸೂಚನೆಯಂತೆ ಬಂಧಿತ ಐವರು ಶಂಕಿತರು ಕೆಲಸ ಮಾಡುತ್ತಿದ್ದರು. ದೊಡ್ಡ ಪ್ರಮಾಣದಲ್ಲಿ ಸ್ಫೋಟಕಗಳನ್ನು ಕೂಡ ಸಂಗ್ರಹಿಸಿದ್ದರು. ನಾಸೀರ್ ವಿರುದ್ಧ ಜೈಲಿನಲ್ಲಿಯೇ ಉಗ್ರ ಚಟುವಟಿಕೆಗೆ ತರಬೇತಿ ನೀಡಿದ್ದ ಆರೋಪ ಮತ್ತು ಜೈಲಿನಲ್ಲಿಯೇ ಕುಳಿತೆ ರಾಜಧಾನಿಯಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ ಆರೋಪಗಳಿವೆ. ಐವರು ಶಂಕಿತ ಉಗ್ರರ ಬಂಧನ ಪ್ರಕರಣದಲ್ಲಿ ನಾಸೀರ್ ಎ-೧ ಆರೋಪಿಯಾಗಿದ್ದಾನೆ. ಈತ ಈ ಹಿಂದೆ ಬೆಂಗಳೂರು ಸರಣಿ ಬಾಂಬ್ ಸ್ಫೋಟ ಸೇರಿ ೩೬ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಆರೋಪಿಯು ಜೈಲಿನಲ್ಲಿ ಕುಳಿತು ನಗರದ ಜನಸಂದಣಿ ಪ್ರದೇಶದಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದನೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿ ಹಲವು ಮಾಹಿತಿಗಳನ್ನು ಕಲೆ ಹಾಕಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + seventeen =
Remember me
