ಮಂಡ್ಯ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕೋವಿಡ್-19 ಕುರಿತು ಎಲ್‌ಇಡಿ ವಾಹನಗಳಲ್ಲಿ ನಡೆಸುತ್ತಿರುವ ವಿಶೇಷ ಜಾಗೃತಿ ಕಾರ್ಯಕ್ರಮ ರದ್ದುಗೊಳಿಸಿ, ಇಲಾಖೆಯ ನೋಂದಾಯಿತ ಕಲಾ ತಂಡಗಳಿಗೆ ನೀಡುವಂತೆ ಒತ್ತಾಯಿಸಿ ರಾಜ್ಯ ಬೀದಿ ನಾಟಕ ಕಲಾತಂಡಗಳ ಒಕ್ಕೂಟದ ಕಾರ್ಯಕರ್ತರು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ಗೆ ಮನವಿ ಸಲ್ಲಿಸಿದರು.ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಜಾನಪದ ಹಾಗೂ ಬೀದಿ ನಾಟಕ ಕಲಾವಿದರು 20 ವರ್ಷದಿಂದ ವಾರ್ತಾ ಇಲಾಖೆಯ ವಿವಿಧ ಹಂತಗಳಲ್ಲಿ ನೋಂದಾಯಿಸಿಕೊಂಡಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳ ಕುರಿತು ಜನಜಾಗೃತಿಗಾಗಿ ಕಾರ್ಯಕ್ರಮ ಮಾಡುತ್ತಾ ಬದುಕನ್ನು ಕಟ್ಟಿಕೊಂಡಿದ್ದಾರೆ. ಕಳೆದ 8 ತಿಂಗಳಿಂದ ಇಲಾಖೆ ಹಾಗೂ ಬೇರೆ ಯಾವುದೇ ಕಾರ್ಯಕ್ರಮಗಳಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.ಕಲಾವಿದರಿಗಾಗಿಯೇ ಇರುವ ವಾರ್ತಾ ಇಲಾಖೆಯು, ಹೊರ ರಾಜ್ಯದ ಏಜೆನ್ಸಿ ಕಂಪನಿಗಳ ಮೂಲಕ ಎಲ್‌ಇಡಿ ವಾಹನದಲ್ಲಿ ಕಾರ್ಯಕ್ರಮ ನಡೆಸುತ್ತಿರುವುದು ಸರಿಯಲ್ಲ. ಎಲ್‌ಇಡಿ ವಾಹನದ ಕಾರ್ಯಕ್ರಮ ಮುಂದುವರಿಸಿದಲ್ಲಿ ಉಪವಾಸ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ಕಲಾವಿದರ ಸಂಘದ ಅಧ್ಯಕ್ಷ ಬಸವರಾಜು ಸಂತೆಕಸಲಗೆರೆ, ಮುಖಂಡರಾದ ಎಂ.ಬಸವಯ್ಯ, ಟಿ.ಎಂ.ನಾಗರಾಜು, ಮಂಜುಳಾ, ಬಸವರಾಜು, ಮೀನಾಕ್ಷ್ಮಮ್ಮ, ವೈರಮುಡಿ ಇತರರಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eight + ten =
Remember me
