ಬೆಂಗಳೂರು:ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಸಿದ್ಧಪಡಿಸಲಾಗಿರುವ ಪಠ್ಯಪುಸ್ತಕದಲ್ಲಿರುವ ವಿಷಯವೊಂದು ಇದೀಗ ಭಾರಿ ವಿವಾದ ಸೃಷ್ಟಿಸುವ ಲಕ್ಷಣಗಳು ಕಾಣುತ್ತಿದೆ. ಈಗಾಗಲೇ ಪಠ್ಯ ವಿಷಯದ ವಿರುದ್ಧ ವಿದ್ಯಾರ್ಥಿಗಳು ತಮ್ಮ ಆಕ್ರೋಶ ಹೊರಹಾಕಿದ್ದು, ಕೂಡಲೇ ವಿಷಯವನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದಾರೆ.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮದ ಅನ್ವಯ ಮೈಸೂರು ವಿಶ್ವವಿದ್ಯಾನಿಲಯದ ಪಠ್ಯಕ್ರಮದಲ್ಲಿ ಪದವಿ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಏಡ್ಸ್ ಮತ್ತು ಕ್ಯಾನ್ಸರ್​ಗೆ ಸ್ವಮೂತ್ರ ಪಾನವೇ ಮದ್ದು ಎಂದು ಉಲ್ಲೇಖಿಸಲಾಗಿದೆ. ಇದು ಅತ್ಯಂತ ಅವೈಜ್ಞಾನಿಕ ಮತ್ತು ಮೂರ್ಖತನದ ಪರಮಾವಧಿ ವಿದ್ಯಾರ್ಥಿಗಳು ಟೀಕೆ ಮಾಡಿದ್ದಾರೆ.
ಮೂತ್ರ ಚಿಕಿತ್ಸೆಯು ಪ್ರಕೃತಿ ಚಿಕಿತ್ಸೆಯ ಒಂದು ಭಾಗವಾಗಿದೆ. ಸ್ವಮೂತ್ರ ಪಾನದಿಂದ ಏಡ್ಸ್, ಕ್ಯಾನ್ಸರ್, ಕಣ್ಣು, ಕಿವಿ, ಹಲ್ಲು, ಹಾಗೂ ಚರ್ಮರೋಗಗಳನ್ನು ನಿಯಂತ್ರಿಸಬಹುದು ಎಂಬ ಅವೈಜ್ಞಾನಿಕವಾದ ಅಂಶಗಳನ್ನು ವಿಶ್ವವಿದ್ಯಾನಿಲಯದ ಪಠ್ಯಕ್ರಮದಲ್ಲಿ ಅಳವಡಿಸಿರುವುದು ದುರಂತವೇ ಸರಿ ಎಂದು ಆಕ್ರೋಶ ಹೊರಹಾಕಿದ್ದಾರೆ.
ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ವೈಜ್ಞಾನಿಕವಾಗಿ ಸಾಬೀತಾಗಿರುವ ಅಂಶಗಳನ್ನು ಸೇರಿಸಬೇಕೆ ಹೊರತು, ಕೇವಲ ಪ್ರಾಚೀನ ಗ್ರಂಥಗಳನ್ನು ಉಲ್ಲೇಖ ಮಾಡಿ ಈ ರೀತಿ ಪಠ್ಯಗಳನ್ನು ರಚಿಸಿರುವುದನ್ನು ಈ ಕೂಡಲೇ ವಾಪಸ್ ಪಡೆಯಬೇಕೆಂದು ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ.
ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ವೈಜ್ಞಾನಿಕ, ಪ್ರಜಾತಂತ್ರ, ಧರ್ಮ ನಿರಪೇಕ್ಷತ ಶಿಕ್ಷಣವನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು. ಈ ಕೂಡಲೇ ವಿಶ್ವವಿದ್ಯಾನಿಲಯದ ಪದಾಧಿಕಾರಿಗಳು ಹಾಗೂ ಸರ್ಕಾರವೇ ಮಧ್ಯಪ್ರವೇಶಿಸಿ ಅವೈಜ್ಞಾನಿಕ ಪಠ್ಯಕ್ರಮವನ್ನು ಹಿಂಪಡೆಯಬೇಕು ಇಲ್ಲದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಅವೈಜ್ಞಾನಿಕ ಶಿಕ್ಷಣ ಪದ್ಧತಿಯನ್ನು ರೂಪಿಸುತ್ತಿರುವ NEP-2020 ಶಿಕ್ಷಣ ಪದ್ಧತಿಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.
ಮೈಸೂರು ವಿವಿ ಪದವಿ ತರಗತಿಗೆಂದು ಬರೆದಿರುವ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದ ಒಂದು ಅಧ್ಯಯನದಲ್ಲಿ ಇದು ಉಲ್ಲೇಖವಾಗಿದೆ. ಪ್ರೊ ಕೆ. ಭೈರಪ್ಪ ಬರೆದಿರುವ ಪುಸ್ತಕ ಇದಾಗಿದೆ. ಮೈಸೂರು ವಿವಿಯ ಬಿ. ಎ. ಆರ್ಟ್ಸ್ ಕೋರ್ಸ್ 5ನೇ ಸೆಮಿಸ್ಟರ್ ಪಠ್ಯಪುಸ್ತಕ ವೈದ್ಯಕೀಯ ಸಮಾಜ ಶಾಸ್ತ್ರದಲ್ಲಿ ಈ ಅಧ್ಯಯನವಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಶಿಫಾರಸ್ಸಿಗೆ ಅನುಗುಣವಾಗಿ ಮೈಸೂರು ವಿವಿ ಅಡಿಯಲ್ಲಿ ಪುಸ್ತಕ ಪ್ರಕಟವಾಗಿದೆ.
ಮೂತ್ರ ಚಿಕಿತ್ಸೆ, ಗೋಮೂತ್ರ ಚಿಕಿತ್ಸೆ, ಶಂಕು ಚಿಕಿತ್ಸೆ, ಚುಟ್ಕಿ ಚಿಕಿತ್ಸೆ, ತೈಲ ಚಿಕಿತ್ಸೆ, ಸಿದ್ಧ ವೈದ್ಯ ಪದ್ಧತಿ, ಜ್ಯೂಸ್ ಚಿಕಿತ್ಸೆ ಇತ್ಯಾದಿಗಳ ಅಧ್ಯಾಯನದಲ್ಲಿ ಪರಿಚಯ ಮಾಡಲಾಗಿದೆ. ಹೀಗಾಗಿ ಇದು ಆಕ್ರೋಶಕ್ಕೆ ಕಾರಣವಾಗಿದ್ದು, ಮುಂದೆ ಯಾವ ತಿರುವು ಪಡೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.(ದಿಗ್ವಿಜಯ ನ್ಯೂಸ್​)


ಪತ್ನಿ ಹತ್ಯೆ ಮಾಡಿ ಮೃತದೇಹಕ್ಕೆ ಹೂವಿನ ಹಾರವಿಟ್ಟು ಪೊಲೀಸ್​ ಠಾಣೆಗೆ ತೆರಳಿ ಶರಣಾದ ಪತಿ!

ಕುವೈತ್‌ನಲ್ಲಿರುವ ಭಾರತೀಯ ಇಂಜಿನಿಯರ್‌ಗಳ ಪರಿಸ್ಥಿತಿ ಭಾರತದ ಶಿಕ್ಷಣ ವ್ಯವಸ್ಥೆಗೆ ಹಿಡಿದ ಕೈಗನ್ನಡಿ

ತಮನ್ನಾ ಮದುವೆಯಂತೆ! ಅಭಿಮಾನಿಗಳಿಗೆ ಹುಡುಗನ ದರ್ಶನ ಮಾಡಿಸಿದ ನಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + thirteen =
Remember me
