ಬೆಂಗಳೂರು:ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್‌ಎಚ್‌ಎಂ) ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ 2023ರ ಏ.1ರಿಂದ ಅನ್ವಯವಾಗುವಂತೆ ಶೇ.15 ವೇತನ ಹೆಚ್ಚಳ ಮಾಡಿ ಸೂಕ್ತ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರ ಅದೇಶ ಹೊರಡಿಸಿದೆ.
ಎನ್‌ಎಚ್‌ಎಂ ಅಡಿ 3-5 ವರ್ಷ ಕರ್ತವ್ಯ ನಿರ್ವಹಿದವರಿಗೆ ಶೇ.5, 5-10 ವರ್ಷಕ್ಕೆ ಶೇ.10 ಹಾಗೂ 10 ವರ್ಷಗಳಿಗೂ ಹೆಚ್ಚು ಕಾಲದಿಂದ ಕೆಲಸ ಮಾಡುತ್ತಿರುವವರಿಗೆ ಶೇ.15 ವೇತನ ಹೆಚ್ಚಳ ಮಾಡಲಾಗಿದೆ. ಒಳಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಲಾನುಭವಿಗಳ ಸಂಖ್ಯೆ 17,055 ಇದ್ದು, ಇವರೆಲ್ಲರಿಗೂ ಶೇ.15 ವೇತನ ಹೆಚ್ಚಳ ಮಾಡಲು 5,796.21 ಲಕ್ಷ ರೂ. ಅನುದಾನದ ಅಗತ್ಯವಿದ್ದು, ಲಭ್ಯವಿರುವ ಅನುದಾನದಿಂದ ಹಣ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಸೂಚನೆ ನೀಡಲಾಗಿದೆ.
ಸರ್ಕಾರದ ಈ ಕ್ರಮವನ್ನು ಅಖಿಲ ಭಾರತ ಆರೋಗ್ಯ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿಶ್ವರಾಧ್ಯ ಎಚ್.ಯಮೋಜಿ ಸ್ವಾಗತಿಸಿದ್ದು, ಇದು ಸಂಘದ 5ವರ್ಷಗಳ ಹೋರಾಟಕ್ಕೆ ಸಂದ ಜಯ ಎಂದು ತಿಳಿಸಿದ್ದಾರೆ.
ಷರತ್ತು ಕೈಬಿಡಲು ಆಗ್ರಹ:ಸರ್ಕಾರ ಶೇ.15 ವೇತನ ಹೆಚ್ಚಳ ಆದೇಶದಲ್ಲಿ ಕೆಲವು ಷರತ್ತುಗಳನ್ನು ಹಾಕಿದೆ. ಅದರಿಂದ ಸಾವಿರಾರು ನೌಕರರಿಗೆ ತೊಂದರೆಯಾಗಲಿದೆ. ಹಾಗಾಗಿ ಷರತ್ತುಗಳನ್ನು ಹಿಂಪಡೆದು ಶೇ.15 ವೇತನ ಹೆಚ್ಚಳ ಎಲ್ಲ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಅನ್ವಯವಾಗುವಂತೆ ಹಾಗೂ ವರದಿ ಸಲ್ಲಿಸಿದ ದಿನದಿಂದ ಅಥವಾ 2021ರ ಏ.1ರಿಂದ ಅನ್ವಯ ಅಗುವಂತೆ ವೇತನ ಹೆಚ್ಚಳ ಬಾಕಿಯೊಂದಿಗೆ ಜಾರಿಗೊಳಿಸಬೇಕು ಎಂದು ಸಂಘದ ರಾಜ್ಯಾಧ್ಯಕ್ಷ ಶ್ರೀಕಾಂತ್ ಸ್ವಾಮಿ ಹಾಗೂ ಪ್ರಧಾನ ಕಾರ್ಯದರ್ಶಿ ಗವಿಸಿದ್ದಪ್ಪ ಉಪ್ಪಾರ ಮನವಿ ಮಾಡಿದ್ದಾರೆ.
ಸರ್ಕಾರದ ಆದೇಶದ ಪ್ರಕಾರ ಶೇ.15 ವೇತನ ಹೆಚ್ಚಳವು ಹೊರಗುತ್ತಿಗೆ ಸೇರಿ ಕೆಲ ಗುತ್ತಿಗೆ ನೌಕರರಿಗೆ ಅನ್ವಯ ಆಗುವುದಿಲ್ಲ. 60 ವರ್ಷಗಳವರೆಗೆ ಸೇವಾ ಭದ್ರತೆ, ವಿಮೆ ಮತ್ತು ಕೃಪಾಂಕ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಬಗ್ಗೆಯೂ ಸರ್ಕಾರ ಅದೇಶ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + four =
Remember me
