ಬೆಳಗಾವಿ:ಲಿಂಗಾಯತ ಪಂಚಮಸಾಲಿ ಸಮಾಜದ ಬೃಹತ್ ಸಮಾವೇಶ ಜರುಗುತ್ತಿರುವ ಹಿನ್ನೆಲೆ ಡಿ.22ರಂದು ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ನಿಷೇಧಿಸಿ ನಗರ ಪೊಲೀಸ ಆಯುಕ್ತ ಡಾ. ಎಂ.ಬಿ.‌ಬೋರಲಿಂಗಯ್ಯ ಬುಧವಾರ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿದಿಂದ ರಾಷ್ಟ್ರಿಯ ಹೆದ್ದಾರಿ ಮೂಲಕ ಸುವರ್ಣ ವಿಧಾನಸೌಧದ ಬಳಿ ಬಸ್ತವಾಡದವರೆಗೆ ಪ್ರತಿಭಟನಾ ಮರವಣಿಗೆ ನಡೆಯಲಿದ್ದು ಏಕಕಾಲದಲ್ಲಿ 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಸಂಚಾರದ ದಟ್ಟಣೆ, ಪ್ರಯಾಣಿಕರ ಹಿತದೃಷ್ಟಿಯಿಂದ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯ ಮೇಲೆ ವಾಹನ ಸಂಚಾರವನ್ನು‌ನಿಷೇಧಿಸಲಾಗಿದೆ.
ಮಹಾರಾಷ್ಟ್ರದ ಕೊಲ್ಲಾಪುರದಿಂದ ಹುಬ್ಬಳ್ಳಿ- ಧಾರವಾಡ ಮಾರ್ಗವಾಗಿ ಬೆಂಗಳೂರು ಕಡೆ ಪ್ರಯಾಣಿಸುವ ವಾಹನ ಸವಾರರು ಹುಕ್ಕೇರಿ, ಗೋಕಾಕ, ಯರಗಟ್ಟಿ, ಸವದತ್ತಿ ಮಾರ್ಗವಾಗಿ ಧಾರವಾಡಕ್ಕೆ ‌ಪ್ರಯಾಣ ಬೆಳಸಬಹುದು. ಅಲ್ಲದೆ, ಬೆಳಗಾವಿ ನಗರಕ್ಕೆ‌ಮಾತ್ರ ಬರುವವರು ಎಂದಿನಂತೆ ರಾಷ್ಟ್ರೀಯ ಹೆದ್ದಾರಿ‌ ಮೂಲಕ ಬರಬಹುದು.
ಬೆಂಗಳೂರು ಕಡೆಯಿಂದ ಬೆಳಗಾವಿ ನಗರಕ್ಕೆ ಹಾಗೂ ಕೊಲ್ಲಾಪುರ ಕಡೆ‌ ಪ್ರಯಾಣಿಸುವವರು ಎಂ.ಕೆ. ಹುಬ್ಬಳಿಯ ಹತ್ತಿರ ಮಾರ್ಗ ಬದಲಿಸಿ ಬೈಲಹೊಂಗಲ, ನೇಸರಗಿ ಮಾರ್ಗವಾಗಿ ಬೆಳಗಾವಿ ‌ಕಡೆ ಸಂಚರಿಸಬಹುದು ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + sixteen =
Remember me
