ಬೆಳ್ತಂಗಡಿ:ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ, ಎಸ್​ಡಿಎಂ ಕಾಲೇಜಿನ ಹಳೇ ವಿದ್ಯಾರ್ಥಿನಿ ಸಾಲಿಯತ್​(24) ಬುಧವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿಐಆದ ಸಾಲಿಯತ್​ ಅವರಿಗೆ ವರ್ಷದ ಹಿಂದೆ ವಿವಾಹವಾಗಿತ್ತು. ಪ್ರಸ್ತುತ ಅವರು ಪತಿಯ ಮನೆಯಲ್ಲಿ ನೆಲೆಸಿದ್ದರು.
ಹೃದಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಕಾರಣ ಮಂಗಳೂರಿನ ಆಸ್ಪತ್ರೆ ಒಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ:ಪಾರ್ಟಿ ಮಾಡುವ ವೇಳೆ ನಿಂದನೆ; ಸ್ನೇಹಿತೆಯನ್ನು ಇರಿದು ಕೊಂದ ಗೆಳತಿ
ಪಡಂಗಡಿಯಲ್ಲಿ ಪ್ರಾಥಮಿಕ, ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆ ಉಜಿರೆಯಲ್ಲಿ 9 ತರಗತಿ, ಮುಂಡಾಜೆಯಲ್ಲಿ 10 ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉಜಿರೆ ಎಸ್.ಡಿ.ಎಂ.ನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆಯುತ್ತಿರುವಾಗ ಕ್ರೀಡಾ ಕ್ಷೇತ್ರದಲ್ಲಿ ಅತ್ಯಧಿಕ ಸಾಧನೆ ತೋರಿದ್ದರು.
ರಾಷ್ಟ್ರಮಟ್ಟದ ವಾಲಿಬಾಲ್​ ಸ್ಪರ್ಧೆಯಲ್ಲಿ ಬೆಳ್ಳಿ ಪದಕ, ಸೀನಿಯರ್ ನ್ಯಾಷನಲ್ ದಕ್ಷಿಣ ವಲಯದಲ್ಲಿ ಚಿನ್ನದ ಪದಕ, ಜ್ಯೂನಿಯರ್ ನ್ಯಾಷನಲ್ ನಲ್ಲಿ ತೃತೀಯ ಸ್ಥಾನ ಗಳಿಸಿರುವುದು ಇವರ ಸಾಧನೆಯ ಹಾದಿಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 19 =
Remember me
